LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪೊಲೀಸರ ವೈಫಲ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ, 

ಬೀಳಗಿ - ಪಟ್ಟಣದ ಶ್ರೀ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ವೃದ್ಧೆಯ ಭೀಕರ ಕೊಲೆ ನಡೆದು 4 ತಿಂಗಳು ಕಳೆದರೂ ಹಂತಕರನ್ನು ಪತ್ತೆಹಚ್ಚದ ತಾಲೂಕು ಪೊಲೀಸ್ ಇಲಾಖೆಯ ತನಿಖಾ ವೈಫಲ್ಯವನ್ನು ಖಂಡಿಸಿ, ಶ್ರೀ ಬೀರೇಶ್ವರ ಜಾತ್ರಾ ಕಮಿಟಿ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. 
 ತಾಲೂಕಿನ ಪ್ರಸಿದ್ಧ ಶ್ರೀ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ವೃದ್ಧೆಯೊಬ್ಬರ ಭೀಕರ ಕೊಲೆ ನಡೆದು ಸುಮಾರು ನಾಲ್ಕು ತಿಂಗಳು ಕಳೆದರೂ, ಪೊಲೀಸರು ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸದೆ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶ್ರೀ ಬೀರೇಶ್ವರ ಜಾತ್ರಾ ಕಮಿಟಿ ಹಾಗೂ ಕಾಟಕರ ಓಣಿಯ ಹಿರಿಯರು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆಯ ಮನವಿ ಪತ್ರ ಸಲ್ಲಿಸಿದ್ದಾರೆ.
​ಕಳೆದ ಸುಮಾರು 2 ವರ್ಷಗಳಿಂದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗುತ್ತಿದ್ದ  ಗೌರವ್ವ ಅಯ್ಯಪ್ಪ ಕೊಡೇಕಲ್ ಎಂಬ ವೃದ್ಧೆಯನ್ನು, ಮಾರ್ಚ್ 17 ರಂದು ರಾತ್ರಿ ಕಿಡಿಗೇಡಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದರು. ಮರುದಿನ ಅಂದರೆ 18-03-2026ರ ಯುಗಾದಿ ಪಾಡ್ಯ  ದಿನ ಮುಂಜಾನೆ 6 ಗಂಟೆಗೆ ಪೂಜಾರಿ ದೇವಸ್ಥಾನಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿತ್ತು. ತಕ್ಷಣವೇ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿದ್ದರು.
​ಕೊಲೆ ನಡೆದು 4 ತಿಂಗಳು ಕಳೆದರೂ ಬೀಳಗಿ ಪೊಲೀಸರು ತನಿಖೆಯಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಇಲಾಖೆಯ ಈ ಮಂದಗತಿ ಹಾಗೂ ಬೇಜವಾಬ್ದಾರಿತನದಿಂದಾಗಿ ಬೀಳಗಿಯ ಸಾರ್ವಜನಿಕರಲ್ಲಿ ಹಾಗೂ ಭಕ್ತಾದಿಗಳಲ್ಲಿ ಭೀತಿ ಮತ್ತು ಅಭದ್ರತೆಯ ವಾತಾವರಣ ನಿರ್ಮಾಣವಾಗಿದೆ.
​ಇಷ್ಟು ದಿನ ಕಳೆದರೂ ಒಬ್ಬನೇ ಒಬ್ಬ ಅಪರಾಧಿಯನ್ನು ಬಂಧಿಸಲು ಸಾಧ್ಯವಾಗದಿರುವುದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು DySP ಅವರ ಗಮನಕ್ಕೆ ಹಲವು ಬಾರಿ ತಂದರೂ ಸಹ ಕೆಳಹಂತದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ತನಿಖೆ ಚುರುಕುಗೊಳಿಸದೇ ಇರುವುದು ಅತ್ಯಂತ ಆಘಾತಕಾರಿ ಸಂಗತಿಯಾಗಿದೆ.
​ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮುಂಬರುವ 15 ದಿನಗಳ ಒಳಗಾಗಿ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಇಲ್ಲದಿದ್ದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಎದುರು ಬೃಹತ್ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮಿತಿ ಎಚ್ಚರಿಸಿದೆ.
 ಈ ಸಂದರ್ಭದಲ್ಲಿ ಹಿರಿಯರಾದ ಪುಡಿಯನ್ನು ಕರಿಗಾರ, ಕರಿಯಪ್ಪ ಬಿದರಿ, ರಾಜು ಬಿದರಿ, ಕಲ್ಲಪ್ಪ ಬಿದರಿ, ಪರಶುರಾಮ್ ಪೂಜಾರಿ, ಶಿವಾನಂದ ಮಾದರ, ಹನುಮಂತ್ ಯಡಹಳ್ಳಿ, ವಿಠ್ಠಲ ಗಡ್ಡದ, ಕರಿಯಪ್ಪ ದಂದರಗಿ, ದರಿಯಪ್ಪ ಬಿದರಿ, ಬೀರೇಶ್ ಪೂಜಾರಿ, ಹಾಗೂ ಊರಿನ ಮುಖಂಡರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್