LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಮಖಂಡಿಯಲ್ಲಿ ಜನಸಂಪರ್ಕ ಸಭೆ : ೧೩ ಅರ್ಜಿಗಳ ಸ್ವೀಕಾರ

ಬಾಗಲಕೋಟೆ, ಜೂನ್ ೧೧ : ಜಮಖಂಡಿ ತಹಶೀಲ್ದಾರ ಕಾರ್ಯಾಲಯದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಬಿ.ನಂದಗಾವಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ೧೩ ಅರ್ಜಿಗಳು ಸ್ವೀಕರಿಸಲಾಯಿತು.
ಜನಸಂಪರ್ಕ ಸಭೆಯಲ್ಲಿ ಜಮಖಂಡಿ ತಾಲೂಕಾ ಮಟ್ಟದ ವಿವಿಧ ಇಲಾಖೆಯ ೪೦ ಜನ ಅಧಿಕಾರಿಗಳು ಸೇರಿದಂತೆ ಲೋಕಾಯುಕ್ತ ಠಾಣೆಯ ಪೊಲೀಸ್ ಉಪಾಧೀಕ್ಷಕ ಸುರೇಶರೆಡ್ಡಿ ಎಂ.ಎಸ್, ಪೊಲೀಸ್ ನಿರೀಕ್ಷಕರಾದ ಎಂ.ಬಿ.ಬಿರಾದಾರ, ಎನ್.ಆರ್.ಖಿಲಾರೆ ಹಾಜರಿದ್ದು, ಬಂದ ದೂರು ಅರ್ಜಿಗಳನ್ನು ಕೂಡಲೇ ಇತ್ಯರ್ಥಪಡಿಸಿ ಹಿಂಬರಹ ಇಲ್ಲವೇ ಮಾಹಿತಿ ನೀಡುವಂತೆ ಸಭೆಯಲ್ಲಿ ಸೂಚಿಸಲಾಯಿತು.  
ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ವಿಚಾರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಧ್ಯತೆಯ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲು ಮತ್ತು ಸಾರ್ವಜನಿಕ ಸಲ್ಲಿಸಿದ ಅರ್ಜಿಗಳನ್ನು ಸ್ವೀಕೃತಿ ವಿಭಾಗದಲ್ಲಿ ಸ್ವೀಕರಿಸಿ ಸಂಬಂಧಿಸಿದವರಿಗೆ ಸ್ವೀಕೃತಿ ನೀಡಲು ಹಾಗೂ ಸದರಿ ವಿಷಯಗಳನ್ನು ವಿನಾಕಾರಣ ಬಾಕಿ ಇಟ್ಟುಕೊಳ್ಳದೇ ನಿಯಮಾನುಸಾರ ಕ್ರಮ ಜರುಗಿಸಲು ತಿಳಿಸಲಾಯಿತು. 
ಒಂದು ವೇಳೆ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದಿದ್ದಲ್ಲಿ ಸೂಕ್ತ ಮಾಹಿತಿಯೊಂದಿಗೆ ಕೂಡಲೇ ಹಿಂಬರಹ ನೀಡಲು ಸೂಚಿಸಲಾಯಿತು. ಶಾಲೆ, ಕಾಲೇಜು ಹಾಗೂ ವಸತಿ ನಿಲಯಗಳ ಆವರಣದಲ್ಲಿ ಮತ್ತು ಅಕ್ಕ-ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿರುವ ವಿದ್ಯುತ್ ಕಂಭ ಪರಿವರ್ತಕ ಹಾಗೂ ಇತರೆ ಇಲೆಕ್ಟ್ರಿಕ್ ಸಾಧನಗಳನ್ನು ತುರ್ತಾಗಿ ಸ್ಥಳಾಂತರ ಮಾಡಲು ಹಾಜರಿದ್ದ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಸಾರ್ವಜನಿಕ ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವದರ ಜೊತೆಗೆ ಬಯಲು ಮುಕ್ತ ಶೌಚಾಲಯ ಆಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್