LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಉಕ್ರೇನ್‌ ಮತ್ತು ರಷ್ಯಾ ಭೀಕರ ಕಾಳಗ; ಕದನ ವಿರಾಮಕ್ಕೆ ಒಪ್ಪಿದ ಪುಟಿನ್‌

ವಾಷಿಂಗ್ಟನ್(ಯುಎಸ್‌ಎ)​: ಉಕ್ರೇನ್​-ರಷ್ಯಾ ನಡುವೆ ಕದನ ವಿರಾಮ ಘೋಷಿಸುವ ಅಮೆರಿಕದ ಪ್ರಸ್ತಾಪವನ್ನು ವ್ಲಾಡಿಮಿರ್​ ಪುಟನ್​ ಒಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಯುದ್ದ ಅಂತ್ಯಗೊಳಿಸುವ ಕುರಿತು ಮಂಗಳವಾರ ದೂರವಾಣಿ ಕರೆ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಕ್ರೇನ್‌ನ ಇಂಧನ ಮೂಲಸೌಕರ್ಯಕ್ಕಾಗಿ 30 ದಿನಗಳ ತಕ್ಷಣದ ಸಣ್ಣ ಕದನ ವಿರಾಮಕ್ಕೆ ರಷ್ಯಾ ಒಪ್ಪಿಗೆ ಸೂಚಿಸಿದೆ.


ಉಕ್ರೇನ್​ನ ಇಂಧನ ಹಾಗೂ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಲು ಪುಟಿನ್ ಮತ್ತು ಟ್ರಂಪ್ ನಡುವೆ ಪ್ರಾಥಮಿಕ ಒಪ್ಪಂದವಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮ ಟ್ರುಥ್​ನಲ್ಲಿ ಟ್ರಂಪ್​, "ಶಾಂತಿ ಒಪ್ಪಂದಕ್ಕೆ ಅನೇಕ ಅಂಶಗಳ ಕುರಿತು ಮಾತುಕತೆ ನಡೆಸಲಾಗಿದೆ. ಇದರ ಪರಿಣಾಮ ಕದನ ವಿರಾಮ ಪ್ರಕ್ರಿಯೆ ನಡೆಸಲಾಗುವುದು" ಎಂದಿದ್ದಾರೆ.


"ರಷ್ಯಾಧ್ಯಕ್ಷರ ಜೊತೆಗಿನ ತಮ್ಮ ಮಾತುಕತೆ ಫಲಪ್ರದವಾಗಿದೆ. ಎಲ್ಲಾ ಇಂಧನ ಮತ್ತು ಮೂಲಸೌಕರ್ಯದ ಮೇಲಿನ ಕದನ ವಿರಾಮಕ್ಕೆ ರಷ್ಯಾ ಒಪ್ಪಿದೆ. ಈ ಕದನ ವಿರಾಮವನ್ನು ತ್ವರಿತಗೊಳಿಸಲು ನಾವು ಕಾರ್ಯನಿರ್ವಹಿಸುತ್ತೇವೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಭೀಕರ ಯುದ್ಧವನ್ನು ಕೊನೆಗೊಳಿಸಬೇಕಿದೆ. ಆಗ ನಾನು ಅಧ್ಯಕ್ಷನಾಗಿದ್ದಿದ್ದರೆ ಈ ಯುದ್ದವೇ ಪ್ರಾರಂಭವಾಗುತ್ತಿರಲಿಲ್ಲ. ಯುದ್ಧದಲ್ಲಿ ಅನೇಕ ಸೈನಿಕರು ಸಾವನ್ನಪ್ಪಿದ್ದಾರೆ. ಪುಟಿನ್​ ಮತ್ತು ಝೆಲನ್ಸ್ಕಿ ಇಬ್ಬರೂ ಯುದ್ದ ಕೊನೆಗೊಳಿಸಲು ಬಯಸಿದ್ದಾರೆ. ಈ ಪ್ರಕ್ರಿಯೆ ಇದೀಗ ಪೂರ್ಣ ಪ್ರಮಾಣದಲ್ಲಿದೆ. ಮಾನವೀಯತೆ ದೃಷ್ಟಿಯಿಂದ ನಾವು ಕೆಲಸ ಮಾಡುತ್ತೇವೆ" ಎಂದು ಟ್ರಂಪ್ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್