LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೇಗನೆ ಸಚಿವ ಸಂಪುಟ ವಿಸ್ತರಣೆ ಮಾಡಿ : ಪ್ರಶಾಂತ ಕಾಳೆ

ಇಂಡಿ : ಉತ್ತರ ಕರ್ನಾಟಕದಾಧ್ಯಂತ ಮುಂಗಾರು ಮಳೆ ಇಲ್ಲದೆ ಬರ ಆವರಿಸಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬೇಗನೆ ಸಚಿವ ಸಂಪುಟ ವಿಸ್ತರಣೆ ಮಾಡಿ,ಸಚಿವರನ್ನು ಬರಪೀಡಿತ ಜಿಲ್ಲೆಗಳ ಉಸ್ತುವಾರಿಗಳನ್ನಾಗಿ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯಿಂದ ರೈತರು,ಜನ,ಜಾನುವಾರುಗಳು ತೊಂದರೆ ಅನುಭವಿಸುತ್ತಿವೆ. ಬರ ಕಾಮಗಾರಿ ಸಮರೋಪಾದಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಕರೆದು ಯೋಜನೆಗಳನ್ನು ರೂಪಿಸಲು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿ ನೂತನ ಸಚಿವರಿಗೆ ಜವಾಬ್ದಾರಿ ವಹಿಸಿದರೆ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಭರವಸೆ ಇಟ್ಟಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಅದಷ್ಟು ಬೇಗನೆ ಸಚಿವ ಸಂಪುಟ ಪೂರ್ಣಪ್ರಮಾಣದಲ್ಲಿ ರಚನೆ ಮಾಡಬೇಕು ಎಂದು ಪಕ್ಷದ ವರಿಷ್ಠರು ಹಾಗೂ ಸಿಎಂ,ಡಿಸಿಎಂ ಅವರಿಗೆ ಮನವಿ ಮಾಡಿದ್ದಾರೆ.
ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡಿ : ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ, ಗಡಿ ಮತಕ್ಷೇತ್ರ ಇಂಡಿಯ ಸರ್ವತೋಮುಖ ಬೆಳವಣಿಗೆಗೆ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ ಎರಡನೇ ಅವಧಿಯ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಶಾಂತ ಕಾಳೆ ಆಗ್ರಹಿಸಿದರು.
ಕೈಗಾರಿಕೆ,ನೀರಾವರಿ,ಶಿಕ್ಷಣ, ಉದ್ಯೋಗ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್