LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ಪೇಸ್ ಮೆಡಿಸಿನ್ ಅಭಿವೃದ್ಧಿಯಲ್ಲಿ ಇಸ್ರೋ ಜೊತೆ ಆರ್​​ವಿಸಿಇ ವಿಧ್ಯಾರ್ಥಿಗಳು ಸಾಥ್‌

ಬೆಂಗಳೂರು, ಫೆಬ್ರವರಿ 25: ಭಾರತ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿವಿಧ ಯಶಸ್ವಿ ಮಿಷನ್​ಗಳ ಮೂಲಕ ಜಾಗತಿಕ ಬಾಹ್ಯಾಕಾಶ ಲೋಕ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಯಾದ PSLV-4 ತನ್ನ ಕಕ್ಷೆ ಸೇರಿದ್ದು, ಬೆಂಗಳೂರಿನ ವಿದ್ಯಾರ್ಥಿಗಳು ಇದರ ಭಾಗವಾಗಿ ಕೆಲಸ ಮಾಡಿದ್ದು, ದೇಶದ ಮೊದಲ ವಿದ್ಯಾರ್ಥಿ ನಿರ್ಮಿತ ಮೈಕ್ರೋ ಬಯಲಾಜಿಕಲ್ ನ್ಯಾನೋ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

SPADEX/POEM-4 ಮಿಷನ್‌ನ ಭಾಗವಾಗಿ ಕಳೆದ ಡಿಸೆಂಬರ್‌ನಲ್ಲಿ ಇಸ್ರೋದ PSLV C-60 ನಲ್ಲಿ ಉಡಾವಣೆಯಾದ ಭಾರತದ ಮೊದಲ ಮೈಕ್ರೋ ಬಯೋಲಾಜಿಕಲ್ ನ್ಯಾನೊ ಸಾಟ್‌ಲೈಟ್ RVSAT-1 ಅನ್ನು ವಿನ್ಯಾಸ ಮತ್ತು ಅಭಿವೃದ್ಧಿ ಮಾಡುವ ಬೆಂಗಳೂರಿನ RV ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ತಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಬಾಹ್ಯಾಕಾಶದಲ್ಲಿ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಅಧ್ಯಯನ ಮಾಡುವ ಸಲುವಾಗಿ ಬೆಂಗಳೂರಿನ RV ಕಾಲೇಜ್ ಆಫ್ ಎಂಜಿನಿಯರಿಂಗ್‌ನ ವಿದ್ಯಾರ್ಥಿಗಳ ತಂಡವು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ.

ಕರುಳಿನ ಬ್ಯಾಕ್ಟೀರಿಯಾವು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಮೂಲಕ ನಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇನ್ನು ಬಾಹ್ಯಾಕಾಶದಲ್ಲಿ ಕರುಳಿನ ಬ್ಯಾಕ್ಟೀರಿಯಾಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ತಿಳಿದುಕೊಳ್ಳಲು ಈ ಪ್ರಯೋಗ ನಿರ್ಣಾಯಕವಾಗಿದ್ದು, ಇಸ್ರೋ ಬಾಹ್ಯಾಕಾಶ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಗಗನಯಾತ್ರಿಗಳನ್ನು ಆರೋಗ್ಯವಾಗಿಡಲು ಮಾರ್ಗಗಳನ್ನು ಕಂಡುಕೊಳ್ಳಲು ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ಆರ್​ವಿಸಿಇ ಕಾಲೇಜು ಪ್ರಾಂಶುಪಾಲ ಸುಬ್ರಮಣ್ಯ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್