LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ


ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.


ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.


ಕ್ಯಾಸಲ್​​ ರಾಕ್, ಕದ್ರಾದಲ್ಲಿ ಸೋಮವಾರ ಮಳೆಯಾಗಿದ್ದು, ಉಳಿದೆಡೆ ಒಣಹವೆ ಇತ್ತು. ಬೆಂಗಳೂರಲ್ಲಿ ಹೇಗಿದೆ ವಾತಾವರಣ?: ಬೆಂಗಳೂರು ನಗರದಲ್ಲಿಂದು 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದರೆ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ. ಹೆಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇರಲಿದ್ದು, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್