LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಮನಗರ ಜಿಲ್ಲೆ ಮರುನಾಮಕರಣ 100% ಗೊತ್ತಿರುವ ಕಾನೂನು ಬಳಸಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್‌

ಬೆಂಗಳೂರು/ದೆಹಲಿ: "ರಾಮನಗರ ಜಿಲ್ಲೆಯ ಹೆಸರನ್ನು 'ಬೆಂಗಳೂರು ದಕ್ಷಿಣ' ಎಂದು ಬದಲಾವಣೆ ಮಾಡುವುದು ಶತಸಿದ್ಧ. ಹೇಗೆ ಹೆಸರು ಬದಲಾಯಿಸಬೇಕು ಎಂಬುದು ನಮಗೆ ಗೊತ್ತಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.


ಕೇಂದ್ರ ಸರಕಾರ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಪ್ರಸ್ತಾಪವನ್ನು ತಡೆಹಿಡಿದಿರುವ ಕುರಿತು ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, "ಜಿಲ್ಲೆಯ ಹೆಸರು ಬದಲಾವಣೆ ರಾಜ್ಯ ಸರಕಾರಕ್ಕೆ ಸಂಬಂಧಪಟ್ಟ ವಿಚಾರ. ನಮಗೂ ಕಾನೂನು ಗೊತ್ತಿದೆ" ಎಂದರು.


"ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲಾ, ಅವರುಗಳು ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ" ಎಂದರು. ಇದಕ್ಕೆ ಅವರು ಕುಮಾರಸ್ವಾಮಿಯೇ? ಎಂದು ಮಾಧ್ಯಮದವರು ಮರುಪ್ರಶ್ನಿಸಿದಾಗ, 'ಇನ್ನ್ಯಾರು?' ಎಂದು ಹೆಸರು ಹೇಳದೆ ಛೇಡಿಸಿದರು.


"ಈ ವಿಚಾರವಾಗಿ ಎಲ್ಲಾ ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದವು. ಹಾಗೆ ನೋಡಿದರೆ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರಕಾರದ ಅನುಮತಿಯ ಅವಶ್ಯಕತೆಯೇ ಇಲ್ಲ" ಎಂದು ಡಿಕೆಶಿ ತಿಳಿಸಿದರು.


"ಜನರ ಹೆಸರು ಬದಲಾವಣೆ ಮಾಡುವಾಗ ಒಂದು ಅಫಿಡವಿಟ್ ಮಾಡಿ ಬದಲಾಯಿಸಬಹುದಾದರೆ ಒಂದು ಜಿಲ್ಲೆಯ ಹೆಸರು ಬದಲಾಯಿಸುವುದು ಕಷ್ಟವೇ?. ಅಷ್ಟಕ್ಕೂ ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಮತ್ತು ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗದಾ‌ಪ್ರಹಾರಕ್ಕೆ ಇವೆಲ್ಲವೂ ಸಾಕ್ಷಿ" ಎಂದರು.


ಎಐಸಿಸಿ ಕಚೇರಿಗೆ ಭೇಟಿ ನೀಡಿರುವ ಕುರಿತ ಪ್ರಶ್ನೆಗೆ, "ದೆಹಲಿಗೆ ಬಂದಾಗಲೆಲ್ಲಾ ಪಕ್ಷದ ದೇವಾಲಯ ಎಐಸಿಸಿ ಕಚೇರಿಗೆ ಭೇಟಿ ನೀಡುತ್ತೇನೆ" ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ