LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿ ಕರೆತಂದು ಕೃತ್ಯದ ಮರುಸೃಷ್ಟಿ






ಬೆಂಗಳೂರು: ಬಾಂಬ್​ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.


ಪ್ರಮುಖ ಆರೋಪಿಯಾಗಿರುವ ಮುಸಾವಿರ್ ಹುಸೇನ್ ಶಾಜಿಬ್, ಘಟನೆಯ ದಿನ ಕ್ಯಾಪ್ ಧರಿಸಿ ಕೆಫೆಗೆ ಹೇಗೆ ಬಂದ? ಎಷ್ಟು ನಿಮಿಷಗಳ ಕಾಲ ಕೆಫೆಯಲ್ಲಿ ಕುಳಿತಿದ್ದ? ಕುಳಿತಿದ್ದಷ್ಟು ಕಾಲ ಏನೇನು ಆರ್ಡರ್ ಮಾಡಿದ್ದ? ನಂತರ ಸ್ಫೋಟಕಗಳಿದ್ದ ಬ್ಯಾಗ್ ಹೇಗೆ ಇರಿಸಿ ವಾಪಸ್ ತೆರಳಿದ ಎಂಬ ಘಟನಾವಳಿಗಳನ್ನ ಆತನಿಂದಲೇ ಮರುಸೃಷ್ಟಿಸಿ ಮಹಜರು ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಫೆ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.


ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್​ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್​​ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನು ಏಪ್ರಿಲ್ 12 ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್