LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಿನಿಮಾ ಆಗುತ್ತಿದೆ ರವಿ ಬೆಳಗೆರೆ ಸಣ್ಣಕಥೆ ವೇಶಗಳು ಜೋಗತಿಯಾಗಿ! ಅಳಿಯ ಶ್ರೀನಗರ ಕಿಟ್ಟಿ  

      ಖ್ಯಾತ ಪತ್ರಕರ್ತ ದಿ. ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ  'ವೇಶಗಳು' ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ.


     ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.

     ಈ ಚಿತ್ರದಲ್ಲಿ ಕೆಲಸ ಮಾಡುವವರೆಲ್ಲರೂ ರಂಗಪ್ರತಿಭೆಗಳೇ ಆಗಿದ್ದರಿಂದ, ರಾಜ್ ಗುರು ಸಂಗಡಿಗರಿಂದ ರಂಗಗೀತೆಗಳ ಗಾಯ‌ದ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

       ಜು.೮ರಂದು ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬದ ದಿನ‌ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ 'ವೇಶಗಳು' ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಬರ್ತ್ ಡೇ  ಸಮಾರಂಭ ಏರ್ಪಡಿಸಲಾಗಿತ್ತು.


ವೇದಿಕೆಯಲ್ಲಿ ನಿರ್ದೇಶಕ ಕಿಶನ್ ರಾವ್ ಅವರು ಈ  ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಲು ಬೆಳಗೆರೆ ಅವರ ಮಗಳು ಭಾವನಾ ಒಪ್ಪಿಗೆ ಹಾಗೂ ಅಳಿಯ ಕಿಟ್ಟಿ ಅವರಿಂದ ಜೋಗತಿ ಪಾತ್ರಕ್ಕೆ ಒಪ್ಪಿಸಲು ಪಟ್ಟಂಥ ಹರಸಾಹಸಗಳನ್ನು ತೆರೆಯ ಮೇಲೆ ಪ್ರದರ್ಶಿಸಲಾಯಿತು.

     ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ  ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್ ಗಳಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ದತೆ ಮಾಡಿಕೊಂಡಿದ್ದಾರೆ.‌ ಚಿತ್ರದಲ್ಲಿ  ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ.

     "ಮುಂದಿನ ತಿಂಗಳಿಂದ ಚಿತ್ರೀಕರಣ ಆರಂಭಿಸುತ್ತಿದ್ದು, ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ವ  ಚಿತ್ರೀಕರಣ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು" ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು.

ಕೌಶಿಕ್ ಹರ್ಷ ಸಂಗೀತ, ರಾಜ್ ಗುರು ದತ್ತರಾಜ್ ಸಂಭಾಷಣೆ, ಅಕ್ಷಯ್ ಪಿ.ರಾವ್ ಸಂಕಲನ ಚಿತ್ರಕ್ಕಿದೆ.

    ಈ ಕಾರ್ಯಕ್ರಮದಲ್ಲಿ  ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು, ಪ್ರವೀಣ್ ಕುಮಾರ್, ಶಿಲ್ಪ ಶ್ರೀನಿವಾಸ್‌, ಕುಶಾಲ್ ಹಾಗೂ  ಮುಂತಾದವರು ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್