LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜಾತಿಗಣತಿ ಮರು ಸಮೀಕ್ಷೆ: 165 ಕೋಟಿ ನೀರಲ್ಲಿ ಹೋಮ; ಸಿದ್ದರಾಮಯ್ಯ ವಿರುದ್ಧ ಅಶೋಕ ಕಿಡಿ

ಬೆಂಗಳೂರು: ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ನೀವು ಏನಿದ್ದರೂ ಹೈಕಮಾಂಡ್‌ ವಾಕ್ಯ ಪರಿಪಾಲಕ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ , ಜಾತಿಗಣತಿ ಮರು ಸಮೀಕ್ಷೆ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡಿಗರ ಪ್ರಶ್ನೆಗಳು ಎಂದು ಬರೆದುಕೊಂಡಿರುವ ಅಶೋಕ್, ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ, ಆದರೆ ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ. ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ?

ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತುಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ? ಎಂದು ಪ್ರಶ್ನಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ