LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ"


ವಿಜಯನಗರ (ಹೊಸಪೇಟೆ).೩೦ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ’ಎ’ ಮತ್ತು ’ಬಿ’ ದರ್ಜೆಯ ಹಾಗೂ ಪ್ರಮುಖ ದೇವಾಲಯಗಳ ಆಡಳಿತ, ಹುಂಡಿ ಎಣಿಕೆ ಕಾರ್ಯವಿಧಾನ, ಆಸ್ತಿ ರಕ್ಷಣೆ ಹಾಗೂ ಭಕ್ತಾದಿಗಳ ಸೌಲಭ್ಯಗಳಲ್ಲಿ ಪಾರದರ್ಶಕತೆ ಕಾಪಾಡಲು ಹುಂಡಿ ಎಣಿಕೆಗೆ ಫೇಸ್ ರೆಕಗ್ನೈಜೇಷನ್, ಸಿಸಿಟಿವಿ, ಡಿಜಿಟಲ್ ಪಾವತಿ ವ್ಯವಸ್ಥೆ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಂಡಿ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಳ್ಳುವ ಕಂದಾಯ, ಪೊಲೀಸ್ ಹಾಗೂ ದೇವಾಲಯದ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಫೇಸ್ ರೆಕಗ್ನಿಷನ್ ಯಂತ್ರದ ಮೂಲಕವೇ ಹಾಜರಾತಿ ನಮೂದಿಸಬೇಕು. ಈ ಯಂತ್ರವನ್ನು ದೇವಾಲಯದ ನಿಧಿಯಿಂದಲೇ ಖರೀದಿಸಲು ಸೂಚಿಸಿದರು. ಎಣಿಕೆ ಕೊಠಡಿಗೆ ಪ್ರವೇಶಿಸುವ ಪ್ರತಿಯೊಬ್ಬ ಸಿಬ್ಬಂದಿ ತಮ್ಮ ಬಳಿ ಇರುವ ನಗದು ವಿವರವನ್ನು ಪ್ರವೇಶ ವಹಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯ ಎ, ಬಿ ಹಾಗೂ ಅಗತ್ಯವಿರುವ ’ಸಿ’ ದರ್ಜೆಯ ದೇವಾಲಯಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ತಪ್ಪದೇ ಹುಂಡಿ ಎಣಿಕೆ ನಡೆಸಬೇಕು. ಈ ಎಣಿಕೆ ಪ್ರಕ್ರಿಯೆಯು ಸಹಾಯಕ ಆಯುಕ್ತರು, ಕಂದಾಯ ಇಲಾಖೆ, ಪೊಲೀಸ್, ತಹಶೀಲ್ದಾರ್, ಪಂಚಾಯತ್, ಬ್ಯಾಂಕ್ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳ ಜಂಟಿ ಉಸ್ತುವಾರಿಯಲ್ಲಿ ನಡೆಯಬೇಕು. ಎಣಿಕೆ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳ ನಿಯೋಜಿಸುವಂತಿಲ್ಲ. ಎಣಿಕೆ ಕಾರ್ಯದ ಸಂಪೂರ್ಣ ಪ್ರಕ್ರಿಯೆಯನ್ನು ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು.
ಹುಂಡಿ ಎಣಿಕೆ ಸಂದರ್ಭದಲ್ಲಿ ದೊರೆಯುವ ಚಿನ್ನ, ಬೆಳ್ಳಿ ಹಾಗೂ ಇತರೆ ಮೌಲ್ಯಯುತ ವಸ್ತುಗಳನ್ನು ಎಣಿಕೆಯ ದಿನದಂದೇ ಪ್ರಮಾಣೀಕೃತ ಮೌಲ್ಯಮಾಪಕರಿಂದ ಮೌಲ್ಯಮಾಪನ ಮಾಡಿಸಬೇಕು. ಹಣಕಾಸಿನ ನಿರ್ವಹಣೆ ಹಾಗೂ ಲೆಕ್ಕಪರಿಶೋಧನೆ ಪೂರ್ಣಗೊಳಿಸಿ ವರದಿಯೊಂದಿಗೆ ಉಪ ಖಜಾನೆಗೆ ಜಮಾ ಮಾಡಬೇಕು.
ಡಿಜಿಟಲ್ ಪಾವತಿ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆ:
ಜೇಬುಗಳ್ಳತನ ಹಾಗೂ ನಗದು ದುರುಪಯೋಗ ತಡೆಯಲು ಭಕ್ತಾದಿಗಳಿಗೆ ಡಿಜಿಟಲ್ ಪಾವತಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ದೇವಾಲಯಗಳಲ್ಲಿ ಅಧಿಕೃತ ಕ್ಯೂಆರ್ ಕೋಡ್ ಅಳವಡಿಸಬೇಕು. ಈ ಕ್ಯೂಆರ್ ಕೋಡ್‌ಗಳು ಹಾಳಾಗದಂತೆ ಹಾಗೂ ದುರುಪಯೋಗವಾಗದಂತೆ ಕಾಲಕಾಲಕ್ಕೆ ಪರಿಶೀಲಿಸಿ ರಕ್ಷಣೆ ಮಾಡಲು ಸೂಚಿಸಿದರು.
ಅಗ್ನಿಶಾಮಕ ಉಪಕರಣ ಹಾಗೂ ಸಿಬ್ಬಂದಿಗೆ ತರಬೇತಿ: ಎ ಮತ್ತು ಬಿ ದರ್ಜೆಯ ದೇವಾಲಯಗಳ ಹುಂಡಿ ಎಣಿಕೆ ಕೊಠಡಿ ಹಾಗೂ ದೇವಾಲಯದ ಆವರಣದಲ್ಲಿ ಅಗ್ನಿ ಅವಘಡ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಹುಂಡಿ ಎಣಿಕೆ ಸಮಯದಲ್ಲಿ ಅಥವಾ ಸಾಮಾನ್ಯ ದಿನಗಳಲ್ಲಿ ಕಳವು ಪ್ರಕರಣಗಳು ಕಂಡುಬಂದಲ್ಲಿ, ಸಂಬಂಧಪಟ್ಟ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಧಿಸೂಚಿತ ದೇವಾಲಯಗಳಿಗೆ ಸೇರಿದ ಜಮೀನು ಹಾಗೂ ಸ್ಥಿರಾಸ್ತಿಗಳ ಸರ್ವೇ ಅಳತೆ ಕಾರ್ಯವನ್ನು ಪೂರ್ಣಗೊಳಿಸಿ, ಎಲ್ಲಾ ಆಸ್ತಿ, ಜಮೀನುಗಳ ಖಾತೆಗಳನ್ನು ಕಡ್ಡಾಯವಾಗಿ ದೇವಸ್ಥಾನದ ಹೆಸರಿಗೆ ಇಂದೀಕರಣ ಮಾಡುವಂತೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ವರಷ್ಠಾಧಿಕಾರಿ ಮಂಜುನಾಥ್, ಸಹಾಯಕ ಆಯುಕ್ತ ಪಿ.ವಿವೇಲಕಾನಂದ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಮನೋಹರ್, ಹಿಂದೂ ಧಾರ್ಮಿಕ ಧತ್ತಿ ಇಲಾಖೆ ಸಹಾಯಕ ಆಯುಕ್ತರಾದ ಸವಿತಾ ಸೇರಿದಂತೆ ಮತ್ತಿತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್