LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಧಾರ್ಮಿಕ ಪಾಠ, ನೈತಿಕ ಮೌಲ್ಯಗಳ ಅರಿವು

ಬಳ್ಳಾರಿ,ಮೇ.19:: ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿರುವ ಜನ್ನತುಲ್ ಫಿರ್ದೋಸ್ ಮಸೀದಿ ಆವರಣದಲ್ಲಿ ಸಮುದಾಯದ ಮಕ್ಕಳಿಗಾಗಿ ವಿಶೇಷ ಪ್ರಾರ್ಥನಾ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಜನ್ನತುಲ್ ಫಿರ್ದೋಸ್ ಮಸೀದಿ ಆಡಳಿತ ಮಂಡಳಿ ಸದಸ್ಯರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಪ್ರಾರ್ಥನೆ, ಧಾರ್ಮಿಕ ಪಾಠಗಳು ಹಾಗೂ ನೈತಿಕ ಮೌಲ್ಯಗಳ ಕುರಿತು ತಿಳುವಳಿಕೆ ಪಡೆದರು.
ಬೇಸಿಗೆ ರಜೆ ಸಂದರ್ಭದಲ್ಲಿ ಮಕ್ಕಳು ಅನಾವಶ್ಯಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಮಾಡಿ, ಧಾರ್ಮಿಕ ಹಾಗೂ ಶಿಸ್ತುಬದ್ಧ ಜೀವನದತ್ತ ಪ್ರೇರೇಪಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.
ಪ್ರಾರ್ಥನೆ ಮತ್ತು ಧಾರ್ಮಿಕ ಬೋಧನೆಗಳ ಮೂಲಕ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ದೇವರ ಬಗ್ಗೆ ಭಕ್ತಿ ಹಾಗೂ ಸಮಾಜದ ಜವಾಬ್ದಾರಿಯ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಮಾಲಿಕ್ ಭಾಷಾ, ಶಫಿ, ಜಾಫರ್ ಸಾಬ್, ನೂರ್ ಮೊಹಮ್ಮದ್, ಮಹಮ್ಮದ್ ಸಬ್, ಜಿಲಾನ್ ಸಬ್, ಅನ್ವರ್ ಭಾಷಾ ಸೇರಿದಂತೆ ಸ್ಥಳೀಯ ಮುಖಂಡರು, ಪೋಷಕರು ಹಾಗೂ ಸಮುದಾಯದ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್