LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಡು-ನುಡಿ ಬೆಳೆಸುವ ಪ್ರಾತಿನಿಧಿಕ ಸಂಸ್ಥೆ : ಜಯಶ್ರೀ ಹಿರೇಮಠ



ವಿಜಯಪುರ,ಮೇ,೦೭ :  ಕನ್ನಡ ಸಾಹಿತ್ಯ ಪರಿಷತ್ತು  ನಾಡು-ನುಡಿ.ನೆಲ-ಜಲ ಹಾಗೂ ಸಂಸ್ಕೃತಿ-ಪರಂಪರೆ ಉಳಿಸುವ ಬೆಳೆಸುವ ಪ್ರಾತಿನಿಧಿಕ ಸಂಸ್ಥೆಯಾಗಿ. ೧೧೨ ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಆಚರಿಸುತ್ತಿರುವದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಜಯಶ್ರೀ ಹಿರೇಮಠ ಅಭಿಪ್ರಾಯ ವ್ಯಕ್ತಪಡಿಸಿದರು 
ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ೧೧೨ ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡ ಭಾಷೆ ಎರಡು ಸಾವಿರ ವಷ೯ದ ಇತಿಹಾಸ ಹೊಂದಿದೆ. ಕನ್ನಡ ಅನ್ನದ ಭಾಷೆಯಾಗಿದ್ದರಿಂದ ನಾವೆಲ್ಲರೂ ಕನ್ನಡ ಕಡ್ಡಾಯವಾಗಿ ಅಧ್ಯಯನ ಅತ್ಯವಶ್ಯ ಎಂದರು. 
   ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಧೀಕ್ಷಕಿ ಶಶಿಕಲಾ ನಾಯ್ಕೊಡಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ವಾತಾವರಣ ನಿರ್ಮಾಣ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸರಕಾರ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಕನ್ನಡ ಭಾಷೆ ಬೆಳೆಸುವತ್ತ ಗಮನ ಹರಿಸೋಣ ಎಂದರು. 
ಸಾಹಿತಿ ವೈ ಎಚ್ ಲಂಬು  ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ  ವಿಜಯಪುರದಲ್ಲಿ ಕನ್ನಡ ವಾತಾವರಣ ಸೃಷ್ಟಿಸೋಣ. ಕನ್ನಡ ನಮ್ಮೆಲ್ಲರ ಹೆಮ್ಮೆಯ ಭಾಯಿಗಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ದೊರಕಿದ್ದು  ಕನ್ನಡ ಭಾಷೆಗೆ. ಇತ್ತಿಚಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ್ದು ಶ್ಲಾಘನೀಯ ಎಂದರು. 
ಮಲ್ಲಿಕಾರ್ಜುನ ಕೆಳಗಡೆ. ಅಜು೯ನ ಶಿರೂರ. ರಾಜೇಶ್ವರಿ ಹಿಟ್ಟಿನಹಳ್ಳಿ. ಮಹೆತಾಬ ಕಾಗವಾಡ.ವೇದಿಕೆಯಲ್ಲಿದ್ದರು.ರೂಪಾ ರಜಪೂತ. ಆಶಾ ಬಿರಾದಾರ. ಭಾಗೀರಥಿ ಸಿಂದೆ ವಿಜಯಲಕ್ಷ್ಮಿ ಹಳಕಟ್ಟಿ. ಲಕ್ಷ್ಮಿ ಬಿರಾದಾರ. ಗಂಗಮ್ಮ ರಡ್ಡಿ. ಮಂಜುಳಾ ಕಾಳಗಿ. ಸುನಂದಾ ಕೋರಿ ಪ್ರಾಥ೯ಸಿದರುಮಮತಾ ಮುಳಸಾವಳಗಿ ಪ್ರಾಸ್ತಾವಿಕ ಮಾತನಾಡಿದರು. ಯಮನಪ್ಪ ಪವಾರ ನಿರೂಪಿಸಿದರು. ಶೋಭಾ ಬಡಿಗೇರ ವಂದಿಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್