LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ

ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ
ಇಂಡಿ,ಜು,೧೧: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣಿ ಕ್ರಾಸ್‌ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ ಅವರಿಗೆ  ಮನವಿ ಸಲ್ಲಿಸಿದರು. 
ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.
ಇನ್ನೊರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣಿ ಕ್ರಾಸ್‌ನಿಂದ ಬರಗುಡಿ ರಸ್ತೆ ಕ್ರಾಸ್ ವರೆಗಿನ ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಆದ್ದರಿಂದ ಕೂಡಲೆ ತಾವೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗೆ ದಾರಿ ಒದಗಿಸಬೇಕು ಎಂದು ವಿನಂತಿಸಿದರು.
ಈ ಮನವಿ ಸ್ಪಂದಿಸಿದ ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ ಮಾತನಾಡಿ, ಈಗ ಚುನಾವಣೆ ನಿಮಿತ್ಯ  ಎಲ್ಲೆಡೆ ಎಸ್.ಐ.ಆರ್. ಪ್ರಕ್ರಿಯೆ ನಡೆದಿದೆ. ಹೀಗಾಗಿ ಈ ಪ್ರಕ್ರಿಯೆ ಮುಗಿದ ಬಳಿಕ ರಸ್ತೆ ಸಮಸ್ಯೆ ಪರಿಹರಿಸಲಾಗುವದು ಎಂದರು. 
ಈ ಸಂದರ್ಭದಲ್ಲಿ ಮಹೇಶ ಗಾಯಕವಾಡ, ದುಂಡಪ್ಪ ಶಿವಶರಣ, ಶಿವಾನಂದ ಸಿಂಗೆ, ಪ್ರಕಾಶ ಶಿವಶರಣ, ಅಪ್ಪಾಶ ಕಾಂಬಳೆ, ಸಿದ್ದು ಬನಸೋಡೆ, ಉಪಸ್ಥಿತರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್