LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ"

ಮೂಡಲಗಿ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುತ್ತಾ, "ಕುರಾನ್‌ನಲ್ಲಿ ಬರೆದಂತೆ ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಬಿಜೆಪಿ ಮತ್ತು ಆರೆಸ್ಸೆಸ್ ಅದೇ ರೀತಿಯ ವಿಷಸರ್ಪಗಳು, ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ" ಎಂದು ಬಿಜೆಪಿ ಮತ್ತು ಆರೆಸ್ಸೆಸ್ ಸದಸ್ಯರನ್ನು ಕೊಲ್ಲಬೇಕು ಎಂದು ಪ್ರಚೋದಿಸಿದ್ದಾರೆ. ಇಂತಹ ವ್ಯಕ್ತಿಯು ಮಾಡಿರುವ ಬೇಜವಾಬ್ದಾರಿ ಪ್ರಚೋದನೆಯು ದೇಶದಲ್ಲಿರುವ ಲಕ್ಷಾಂತರ ಬಿಜೆಪಿ ಮತ್ತು ಆರೆಸ್ಸೆಸ್ ಸದಸ್ಯರ ಜೀವಕ್ಕೆ ಅಪಾಯವೊಡ್ಡಿದೆ ಎಂದು ಆರೋಪಿಸಿ ಶನಿವಾರದಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಮಾನ್ಯ ಪಿ.ಎಸ್.ಐ. ಅವರಿಗೆ ಬಿಜೆಪಿ ಅರಭಾವಿ ಮಂಡಲದ ಯುವ ಮೋರ್ಚಾ ವತಿಯಿಂದ ಮನವಿ ಸಲ್ಲಿಸಲಾಯಿತು.

ಪೊಲೀಸ ಇಲಾಖೆ ಯಾವುದೇ ಔಪಚಾರಿಕ ದೂರುಗಳಿಗಾಗಿ ಕಾಯದೆ, ಇಂತಹ ಪ್ರಕರಣಗಳಲ್ಲಿ ತಾವಾಗಿಯೇ (ಸುಮೋಟೋ) ಕ್ರಮ ಕೈಗೊಳ್ಳಬೇಕು. ಈ ಪ್ರಚೋದನೆಯ ಪರಿಣಾಮ ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಕ್ಷಾಂತರ ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲು ಹೇಳಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕೂಡಲೇ ಬಂಧಿಸಬೇಕು ಎಂದು ಮನವಿಯಲ್ಲಿ ಕೋರಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಗುರು ಹಿರೇಮಠ, ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ, ಉಪಾಧ್ಯಕ್ಷ ಪಾಂಡು ಮಹೇಂದ್ರಕರ, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲಾಧ್ಯಕ್ಷ ಕಲ್ಮೇಶ್ ಗೋಕಾಕ್, ಮದನ ದಾನನ್ನವವರ, ಕೇದಾರಿ ಭಸ್ಮೆ, ಜಗದೀಶ್ ತೇಲಿ, ಚಂದ್ರಶೇಖರ್ ಪತ್ತಾರ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಕೋಣಿ, ಅಜೀತ ಪಾಟೀಲ್ ಸೇರಿದಂತೆ ಅನೇಕ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್