LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೂಕ ಅನಾಥ ಬಾಲಕನ ಪೋಷಕರ ಪತ್ತಗೆ ಮನವಿ


ಬಳ್ಳಾರಿ,ಜು.18 ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಅಲೆದಾಡುತ್ತಿದ್ದ ಸುಮಾರು 12 ವರ್ಷ ವಯಸ್ಸಿನ ಮೂಕ ಅನಾಥ ಬಾಲಕನೊಬ್ಬ ಪತ್ತೆಯಾಗಿದ್ದು, ಪ್ರಸ್ತುತ ಆತನನ್ನು ಇಲ್ಲಿನ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ. ಬಾಲಕನ ಪೋಷಕರನ್ನು ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ ಅವರು ಮನವಿ ಮಾಡಿದ್ದಾರೆ.
*ಘಟನೆಯ ವಿವರ:*
ಜೂ.06 ರಂದು ಬಳ್ಳಾರಿ ನಗರದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿಯವರು ಈ ಬಾಲಕನನ್ನು ವಶಕ್ಕೆ ಪಡೆದಿದ್ದರು. ಬಾಲಕನ ತಾತ್ಕಾಲಿಕ ಪೋಷಣೆ ಹಾಗೂ ರಕ್ಷಣೆಗಾಗಿ ಅಂದೇ ಆತನನ್ನು ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಬಾಲಕನಿಗೆ ಮಾತನಾಡಲು ಬರುವುದಿಲ್ಲ (ಮೂಕನಾಗಿದ್ದಾನೆ) ಹಾಗೂ ಆತನ ವಿಳಾಸದ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ಲಭ್ಯವಾಗಿಲ್ಲ. ಯಾವುದೇ ಭಾಷೆಯಲ್ಲಿ ಮಾತನಾಡಿಸಿದರೂ ಆತನಿಂದ ಮಾಹಿತಿ ಸಿಗುತ್ತಿಲ್ಲ ಹಾಗೂ ಆತನಿಗೆ ಓದಲು ಮತ್ತು ಬರೆಯಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಬಾಲಕನ ವಿಳಾಸ ಪತ್ತೆ ಹಚ್ಚಲು ಆತನ ಹೆಸರಿನಲ್ಲಿ ಆಧಾರ್ ಕಾರ್ಡ್ ನೋಂದಣಿಯಾಗಿದೆಯೇ ಎಂದು ಪರಿಶೀಲಿಸಲಾಗಿದ್ದು, ಈ ಹಿಂದೆ ಯಾವುದೇ ಆಧಾರ್ ನೋಂದಣಿ ಆಗದಿರುವುದು ಕಂಡುಬAದಿದೆ.
ಬಾಲಕನ ಚಹರೆ: ಎತ್ತರ 4.2 ಅಡಿ, 40 ಕೆ.ಜಿ, ಸಾಧಾರಣ ಮೈಕಟ್ಟು, ಉದ್ದ ಮುಖ, ಕಪ್ಪು ಮೈ ಬಣ್ಣ, ಕಪ್ಪು ತಲೆ ಕೂದಲು ಇರುತ್ತದೆ. ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಹಳದಿ ಚೆಕ್ ಬಣ್ಣದ ಅಂಗಿಯನ್ನು ಪತ್ತೆಯಾದ ಸಂರ್ಧಭದಲ್ಲಿ ಧರಿಸಿರುತ್ತಾನೆ.
ಬಾಲಕನ ಕುಟುಂಬದವರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯ ದೂ.08392-241373, ಬಾಲಮಂದಿರ ಅಧೀಕ್ಷಕರ ಮೊ.9886555312, 8618825644 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್