LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿಯಲ್ಲಿ ಎಸಿ ಬಸ್‌ಗಳನ್ನು ಆರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ 




ಬಳ್ಳಾರಿ, ಮಾ.26.: ಬಳ್ಳಾರಿ ನಗರದಲ್ಲಿ ತೀವ್ರ ಬಿಸಿಲಿನ ನಡುವಿನಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಂಕಷ್ಟವನ್ನು ಗಮನಿಸಿ ನಗರದಲ್ಲಿ ಎಸಿ ಬಸ್‌ಗಳನ್ನು ಸಂಚರಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಎಸ್. ದೇವಾನಂದ್ ಕುಮಾರ್ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರು.


ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ, ಬೇಸಿಗೆ ಅವಧಿಯಲ್ಲಿ ಬಳ್ಳಾರಿಯಲ್ಲಿ ಉಷ್ಣಾಂಶವು 40 ರಿಂದ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಬಿಸಿಲಿನ ಧಗೆಯನ್ನು ಎದುರಿಸುತ್ತಿದ್ದಾರೆ ಎಂದು ವಿವರಿಸಲಾಗಿದೆ. ಇದರಿಂದ ಪ್ರಯಾಣಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಸಂಚಾರ ಮಾಡಲು ಕಷ್ಟಕರವಾಗುತ್ತಿದೆ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಸಾರಿಗೆ ವ್ಯವಸ್ಥೆಯಲ್ಲಿ ಹವಾ ನಿಯಂತ್ರಿತ (ಏರ್ ಕಂಡೀಷನ್) ಬಸ್‌ಗಳನ್ನು ಆರಂಭಿಸಿ ಪ್ರಯಾಣಿಕರಿಗೆ ಉತ್ತಮ ಪ್ರಯಾಣ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಶಕ್ತಿ ಸಂಘಟನೆಯು ಸರ್ಕಾರವನ್ನು ಆಗ್ರಹಿಸಿದೆ.


ಈ ಮನವಿ ನೀಡಿದ ಸಂದರ್ಭದಲ್ಲಿ ಕಾರ್ಮಿಕ ಶಕ್ತಿ ಸಂಘಟನೆಯ ಹೊನ್ನಪ್ಪ, ಆದಿ ಬಸಪ್ಪ, ದೇವೇಂದ್ರ ಹಾಗೂ ಕೆ.ಎ. ರಾಜೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ