Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾದಲ್ಲಿ 'ಮೀಸಲಾತಿ' ಹಿಂಸಾಚಾರ :18 ಜನರು ಸಾವನ್ನಪ್ಪಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯ

ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯ ಸುಧಾರಣೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ನಡೆಸುತ್ತಿರುವ ಪ್ರತಿಭಟನೆ ಭುಗಿಲೆದ್ದಿದೆ. ರಾಷ್ಟ್ರ ರಾಜಧಾನಿ ಢಾಕಾ ಸೇರಿದಂತೆ ಇತರೆಡೆ ಹಿಂಸಾಚಾರ ನಡೆಯುತ್ತಿದೆ. ಗುರುವಾರ ಒಂದೇ ದಿನ ದೇಶಾದ್ಯಂತ ನಡೆದ ಗಲಾಟೆ, ಗಲಭೆಗಳಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನೆ ಉಲ್ಭಣಗೊಂಡ ನಂತರದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.


1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರ ಸಂಬಂಧಿಕರ ಮೀಸಲಾತಿ ಸೇರಿದಂತೆ ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದೆ. ಕಳೆದ ಒಂದು ವಾರದಿಂದ ಢಾಕಾ ಮತ್ತು ಇತರ ನಗರಗಳಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಿರಂತರವಾಗಿ ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಗುರುವಾರ ಇದು ಹಿಂಸಾಚಾರಕ್ಕೆ ತಿರುಗಿತು. ರಾಷ್ಟ್ರವ್ಯಾಪಿ ಘರ್ಷಣೆಗಳು ನಡೆದ ಕುರಿತು ವರದಿಯಾಗಿದೆ.


ಢಾಕಾದ ರಾಂಪುರ ಪ್ರದೇಶದಲ್ಲಿ ಸರ್ಕಾರಿ 'ಭಾಬನ್‌' ದೂರದರ್ಶನ ಕಚೇರಿಗೂ ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ಕಚೇರಿಗೆ ಹಾನಿ ಮಾಡಿದ್ದಾರೆ. ಹಲವಾರು ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ರಬ್ಬರ್ ಬುಲೆಟ್‌ಗಳು, ಅಶ್ರುವಾಯು ಮತ್ತು ಧ್ವನಿ ಗ್ರೆನೇಡ್‌ಗಳನ್ನು ಬಳಸಿದ್ದಾರೆ. ಇತರ ಪ್ರದೇಶಗಳಲ್ಲೂ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ಉಂಟಾಗಿವೆ. ಪರಿಣಾಮ, 18 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*