LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಂದಾಯ ಗ್ರಾಮ ಜಮೀನು ಸರ್ವೆಕಾರ್ಯ ಗೊಂದಲ: ಗ್ರಾಮಸ್ಥರ ಆಕ್ರೋಶ

ಸಿರುಗುಪ್ಪ,ಮೇ.06;.ತಾಲ್ಲೂಕಿನ ಸಿರಿಗೇರಿ ಗ್ರಾಮವನ್ನು ಕಂದಾಯ ಗ್ರಾಮವಾಗಿ ಘೋಷಿಸಲು ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ್ ನೇತೃತ್ವದಲ್ಲಿ ಸಿರಿಗೇರಿ ಗ್ರಾಮದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. 
ಪರಿಶೀಲನೆ ವೇಳೆ ಗ್ರಾಮಸ್ಥರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಜಮೀನಿನ ಕ್ರಯಪತ್ರ ಹೊಂದಿರುವ ಮಾಲೀಕನಿಗೆ ಮುತ್ತಿಗೆ ಹಾಕಿದರು. 
ಸಹಾಯಕ ಆಯುಕ್ತ ಎಚ್ ಡಿ ರಾಜೇಶ್ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ,'ಬಸವನಪೇಟೆ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಉದ್ದೇಶದಿಂದ ಪರಿಶೀಲನೆ ನಡೆಸುತ್ತಿದ್ದು, ಮನೆ ಕಟ್ಟಿ ವಾಸವಿರುವವರಿಗೆ ಮಾತ್ರ ಹಕ್ಕು ಪತ್ರ ನೀಡಲಾಗುವುದು ಎಂದು ತಿಳಿಸಿದರು.
ಬಸವನಪೇಟೆಯ 5.80 ಎಕರೆ ಭೂಮಿಯು ಹಳ್ಳಿ ಮರದ ವೀರೇಶ ಇವರ ಹೆಸರಿನಲ್ಲಿದೆ. ಸರ್ವೆಯಂತೆ ಈಗಾಗಲೆ ಮನೆಕಟ್ಟಿಕೊಂಡು ವಾಸವಾಗಿರುವ 106 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದರು.
ಧಾರವಾಡ ಹೈಕೋರ್ಟ್ ಪೀಠದಲ್ಲಿ ಈ ಕುರಿತು ತಡೆಯಾಜ್ಞೆ ವಾಪಸ್ಸು ಪಡೆದಿರುವ ಜಮೀನಿನ ಮಾಲೀಕ ಹಳ್ಳಿಮರದ ವೀರೇಶ ಸರ್ವೆಕಾರ್ಯಕ್ಕೆ ಸಹಕರಿಸಿ ಈಗಾಗಲೇ ವಾಸವಾಗಿರುವವರಿಗೆ ಮಾತ್ರವೆ ಹಕ್ಕುಪತ್ರ ನೀಡಲು ಒಪ್ಪಿಕೊಳ್ಳುತ್ತೇನೆ  ಎಂದು ತಿಳಿಸಿದರು.
ಸರ್ವೆ ಕಾರ್ಯದ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. 
ಈ ಸಂದರ್ಭದಲ್ಲಿ ಸಿರುಗುಪ್ಪ ತಹಶೀಲ್ದಾರ್ ಗೌಸಿಯಾ ಬೇಗಂ,  ಆರ್ ಐ ಗಣೇಶ್,  ಗ್ರಾಮ ಆಡಳಿತಾಧಿಕಾರಿ ಶಿವಪುತ್ರಪ್ಪ, ನದಾಫ್, ಹೊನ್ನಪ್ಪ, ಪೊಲೀಸ್ ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್