LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಡಿಕೆಶಿ ವಜಾಗೊಳಿಸಿ ಅಥವಾ ಸಂವಿಧಾನ ಬದಲಾಯಿಸುವ ಯೋಜನೆ ಬಹಿರಂಗಪಡಿಸಿ ; ಸದನದಲ್ಲಿ ರಿಜಿಜು ತಪರಾಕಿ

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಆಡಳಿತಾರೂಢ ಬಿಜೆಪಿ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಯಿತು. ಲೋಕಸಭೆಯನ್ನು ಪದೇ ಪದೇ ಮುಂದೂಡಲಾಯಿತು.

ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆ ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದರು. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ವಿಷಯ ಕುರಿತ ಗಮನ ಸೆಳೆಯಲು ಸಮಾಜವಾದಿ ಪಕ್ಷದ ಸದಸ್ಯರು ಫೋಸ್ಟರ್ ಪ್ರದರ್ಶಿಸುತ್ತಾ ಸ್ಪೀಕರ್ ಪೀಠದತ್ತ ಧಾವಿಸಿದರು.

ಎಸ್ ಪಿ ಸದಸ್ಯರು ಸದನದಲ್ಲಿ ಫೋಸ್ಟರ್ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ, 12 ಗಂಟೆಗೆ ಕಲಾಪವನ್ನು ಮುಂದೂಡಿದರು. ಸದನ ಮತ್ತೆ ಸಮಾವೇಶಗೊಂಡಾಗ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್