LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಪಿಎಂಸಿ ಸರ್ಕಲ್‌ನಿಂದ ಡಿವೈಎಸ್ಪಿ ಕಚೇರಿವರೆಗೆ ರಸ್ತೆ ಅಭಿವೃದ್ಧಿಗೆ ಚಾಲನೆ

ಬಳ್ಳಾರಿ :23:. ನಗರದ 3ನೇ ವಾರ್ಡ್ ವ್ಯಾಪ್ತಿಯ ಎಪಿಎಂಸಿ ಸರ್ಕಲ್‌ನಿಂದ ಡಿವೈಎಸ್ಪಿ ಕಚೇರಿವರೆಗೆ, ಬೆಂಕಿ ಮಾರೆಮ್ಮ ದೇವಸ್ಥಾನ ಮಾರ್ಗವಾಗಿ ಸಂಪರ್ಕಿಸುವ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿದರು. ಸುಮಾರು ₹4.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸ್ಥಳೀಯರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ, ನಗರದ ವೇಗವಾಗಿ ವಿಸ್ತಾರವಾಗುತ್ತಿರುವ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಎಪಿಎಂಸಿ ಸರ್ಕಲ್‌ನಿಂದ ಡಿವೈಎಸ್ಪಿ ಕಚೇರಿವರೆಗೆ ಸಾಗುವ ಈ ರಸ್ತೆ ವ್ಯಾಪಾರಿಕ ಹಾಗೂ ವಸತಿ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದೀಗ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟದ ಡಾಂಬರೀಕರಣ, ಒಳಚರಂಡಿ ವ್ಯವಸ್ಥೆ ಸುಧಾರಣೆ, ಅಗತ್ಯವಿರುವ ಕಡೆಗಳಲ್ಲಿ ಪಾದಚಾರಿ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆ ನಿವಾರಣೆಯಾಗುವ ಜೊತೆಗೆ ವಾಹನ ದಟ್ಟಣೆ ಕೂಡ ಕಡಿಮೆಯಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಎಂ. ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು ಹಾಗೂ ವಾಸು ರೆಡ್ಡಿ ಮಾತನಾಡಿ, ನಗರದ ಅಭಿವೃದ್ಧಿಗೆ ಶಾಸಕ ನಾರಾ ಭರತ್ ರೆಡ್ಡಿ ನಿರಂತರವಾಗಿ ಸ್ಪಂದಿಸುತ್ತಿದ್ದು, ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಹಾಗೂ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಸ್ಥಳೀಯರಾದ ಭರತ್, ಕವಿತಾ, ಕುಮಾರನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್