LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

೯೫ ಲಕ್ಷ ರೂ.ಗಳ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಮೇಟಿ ಚಾಲನೆ

ಬಾಗಲಕೋಟೆ, ಜುಲೈ ೦೨  : ಗ್ರಾಮೀಣ ರಸ್ತೆ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬಾಗಲಕೋಟೆ ತಾಲೂಕಿನ ನಾಗರಾಳ ಹಾಗೂ ನಾಗಸಂಪಗಿ ಗ್ರಾಮಗಳಲ್ಲಿ ಒಟ್ಟು ೯೫ ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಾಗರಾಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯವರೆಗೆ ೫೦ ಲಕ್ಷ ರೂ.ಗಳ ವೆಚ್ಚದಲ್ಲಿ ಡಾಂಬರೀಕರಣ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ನಾಗಸಂಪಗಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯವರೆಗೆ ೪೫ ಲಕ್ಷ ರೂ.ಗಳ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ರಸ್ತೆಗಳ ನಿರ್ಮಾಣದಿಂದ ಸಾರ್ವಜನಿಕರ ಸಂಚಾರ ಸುಗಮವಾಗುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ವೇಗ ಸಿಗಲಿದೆ ಎಂದರು.
ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಸರ್ಕಾರದಿಂದ ದೊರೆಯುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. 
ಕಾರ್ಯಕ್ರಮದಲ್ಲಿ ಬಸವಂತಪ್ಪ ಮೇಟಿ, ಹನಮಂತ ಗಣಿ, ಆನಂದ ಮೇಟಿ, ಹುಲ್ಲಪ್ಪ ತೇಜಿ, ಬಸಲಿಂಗಪ್ಪ ಬಿರಾದಾರ, ಹನಮಂತ ಹಂಡಿ, ಸಂಗಪ್ಪ ಸೀತಿಮನಿ, ಗೋವಿಂದ ಪೂಜಾರಿ, ಪವನ್ ಧರ್ಮರ, ರಮೇಶ್ ಕೊಳ್ಳರ, ವೈ. ವೈ. ತಿಮ್ಮಾಪುರ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿರುವರು.
ಛಾಯಾಚಿತ್ರ ಲಗತ್ತಿಸಿದೆ. ೧ ಮತ್ತು ೨

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ