LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತನಿಷ್ಕ್​ ಶೋರೂಂನಲ್ಲಿ ಬಂದೂಕು ತೋರಿಸಿ ದರೋಡೆ; 2 ಕೋಟಿಗೂ ಹೆಚ್ಚು ಲೂಟಿ

ಪೂರ್ಣಿಯಾ: ಬಿಹಾರದಲ್ಲಿ ಬಂದೂಕು ತೋರಿಸಿ ದರೋಡೆ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಶುಕ್ರವಾರ ಪೂರ್ಣಿಯಾದಲ್ಲಿರುವ ತನಿಷ್ಕ್​ ಜ್ಯುವೆಲ್ಲರಿ ಶೋರೂಂ ಒಂದರಲ್ಲಿ ಬಂದೂಕು ತೋರಿಸಿ, ಹಾಡಹಗಲೇ ಕೋಟ್ಯಂತರ ರೂಪಾಯಿ ದರೋಡೆ ಮಾಡಿರುವ ಘಟನೆ ನಡೆದಿದೆ.


7 ದುಷ್ಕರ್ಮಿಗಳಿಂದ ಕೃತ್ಯ: ಪೂರ್ಣಿಯಾ ನಗರದ ಸಹಾಯಕ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 7 ಮಂದಿ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.


ಪೂರ್ಣಿಯಾ ಡಿಎಸ್ಪಿ ಪುಷ್ಕರ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ತನಿಷ್ಕ್ ಜ್ಯುವೆಲ್ಲರಿಯಲ್ಲಿ ದರೋಡೆ ನಡೆದಿರುವ ಬಗ್ಗೆ ಮಾಹಿತಿ ಬಂದ ಕೂಡಲೇ, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಕೃತ್ಯದಲ್ಲಿ 5- 6 ಮಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ಪ್ರಾರಂಭಿಸಿದ್ದೇವೆ. ದರೋಡೆಕೋರರು ತಮ್ಮ ಬ್ಯಾಗ್‌ನಲ್ಲಿ ಚಿನ್ನಾಭರಣಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ" ಎಂದು ತಿಳಿಸಿದರು.


ಎರಡು ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು: ಮಾಹಿತಿ ಪ್ರಕಾರ, ಎರಡು ಬೈಕ್‌ಗಳಲ್ಲಿ 6 ಜನ ಕ್ರಿಮಿನಲ್‌ಗಳು ಬಂದಿದ್ದರು. ಒಬ್ಬ ನಡೆದುಕೊಂಡು ಬಂದು ಶೋರೂಂ ಒಳಹೋಗಿದ್ದಾನೆ. ವಜ್ರದ ಸೆಟ್‌ನಲ್ಲಿ ಅಪರಾಧಿಗಳು ತಮ್ಮ ಕೈಚಳಕ ತೋರಿಸಿದ್ದು, ಎರಡು ಕೋಟಿಗೂ ಹೆಚ್ಚು ಬೆಲೆ ಬಾಳುವ ಆಭರಣ ದರೋಡೆ ಆಗಿದೆ ಎನ್ನಲಾಗುತ್ತಿದೆ. ಅಧಿಕೃತ ಅಂಕಿ - ಅಂಶಗಳು ಇನ್ನೂ ಸ್ಪಷ್ಟವಾಗಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್