LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರೊಮ್ಯಾಂಟಿಕ್‌ ಕಾಮಿಡಿ ದಿ ರಾಜಾಸಾಬ್ ಲವರ್ ಬಾಯ್ ಪ್ರಭಾಸ್  ಝಲಕ್‌ 

     ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌ ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ.

     ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಎದುರಾಗಿದ್ದಾರೆ. ಈ ಪ್ಯಾನ್‌ ಇಂಡಿಯಾ ಚಿತ್ರವೇ 'ದಿ ರಾಜಾಸಾಬ್'. ಚಿತ್ರದ ಸಣ್ಣ ಝಲಕ್‌ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.


      ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. 'ರಾಜಾ ಸಾಬ್' 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆಯಾಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು  ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.


     ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದಾರೆ.


     'ರಾಜಾ ಸಾಬ್‌' ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. 'ರಾಜಾ ಸಾಬ್' ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.


     ಕೋಟಗಿರಿ ವೆಂಕಟೇಶ್ವರರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ  ಛಾಯಾಗ್ರಹಣ, ಸಂಗೀತ ಎಸ್‌ಎಸ್‌ ಥಮನ್ ಹಾಗು ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್