LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೋರ್ಟ್ ಆವರಣದಲ್ಲಿ ರೌಡಿ ಶೀಟರ್ ಅಟ್ಟಹಾಸ ಮಾಧ್ಯಮಗಳ ಮೇಲೆ ಹಲ್ಲೆ -ಅವಾಚ್ಯ ಶಬ್ದಗಳಿಂದ ನಿಂದನೆ



ಬೆಳಗಾವಿ,ಏ,೧೫ : ಬೆಳಗಾವಿಯಲ್ಲಿ ರೌಡಿ ಶೀಟರ್ ಲಕ್ಷಣ ದಡ್ಡಿ ಅಟ್ಟಹಾಸ ಮೇರೆದು ಮಧ್ಯಮಗಳ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ಬುಧವಾರ ಸಂಜೆ ವೇಳೆ ಬೆಳಗಾವಿ ಕೋರ್ಟ್ ಆವರಣದಲ್ಲಿ ನಡೆದಿದೆ.
ಪೊಲೀಸರ ಮುಂದೆಯೇ ರೌಡಿಗಳ ರಾಕ್ಷಸೀ ಪ್ರವೃತ್ತಿಯನ್ನು ವರ್ತನೆ ಮಾಡಿದ್ದಾನೆ. ಬೆಳಗಾವಿಯಲ್ಲಿ ರೌಡಿಶೀಟರ್‌ಗಳ ಪುಂಡಾಟಿಕೆ ಮಿತಿಮೀರಿದೆ. ಶಹಬಾಜ್ ಪಠಾಣ್ ಕೊಲೆ ಪ್ರಕರಣದ ವಿಚಾರಣೆಗೆ ಬಂದಿದ್ದ ರೌಡಿಶೀಟರ್‌ಗಳು, ನ್ಯಾಯಾಲಯದ ಆವರಣದಲ್ಲೇ ಕರ್ತವ್ಯ ನಿರತ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಶಹಬಾಜ್ ಪಠಾಣ್ ಕೊಲೆ ಪ್ರಕರಣಕ್ಕೆ ಸಬಂಧಿಸಿದಂತೆ ಬೆಳಗಾವಿ ಎರಡನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿ ಹಿಂಡಲಗಾ ಜೈಲಿಗೆ ರವಾನೆ ಮಾಡುವ ವೇಳೆ ಮಾಧ್ಯಮಗಳ ಕ್ಯಾಮರಾ ಮೆನ್‌ಗಳು ವಿಡಿಯೋ ಶೂಟಿಂಗ್ ಮಾಡಿಕೊಳ್ಳುತ್ತಿದ್ದಂತೆಯೇ ರಾಕ್ಷಸ ಪ್ರವೃತ್ತಿ
ತೋರಿದ್ದಾನೆ.
ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ, ಬಸವಣ್ಣಿ ನಾಯಕ ಮಾಳಮಾರುತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರು ಪಡಿಸಿ ಬಳಿಕ ಮರಳಿ ಜೈಲಿಗೆ ಕರುಳಿಸುವಾಗ ಈ ಘಟನೆ ನಡೆದಿದೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ರೌಡಿಶೀಟರ್ ವಿರುದ್ಧ ಬೆಳಗಾವಿ ಪತ್ರಕರ್ತರು ಆಕ್ರೋಶವನ್ನು ಹೊರಹಾಕಿ ಆರೋಪಿ ವಿರುದ್ಧ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ಪೊಲೀಸರ ಮುಖಾಂತರ ನ್ಯಾಯಾಲಯಕ್ಕೆ ಮನವಿ ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್