LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ರಷ್ಯಾ-ಉಕ್ರೇನ್‌ ಸಮರದಲ್ಲಿ ದೊಡ್ಡಣ್ಣ ಟ್ರಂಪ್‌ ರಷ್ಯಾ ಪರ ಬೆಂಬಲ

ವಾಷಿಂಗ್ಟನ್​, ಅಮೆರಿಕ: ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್​ - ರಷ್ಯಾ ಯುದ್ಧದಲ್ಲಿ ಆರಂಭದಿಂದಲೂ ಅಮೆರಿಕ ಉಕ್ರೇನ್​ ಪರ ನಿಂತಿತ್ತು. ಆದರೆ, ಇದೀಗ ನಾಟಕೀಯ ಬೆಳವಣಿಗೆಯಲ್ಲಿ ಅಮೆರಿಕ ವಿಶ್ವಸಂಸ್ಥೆ ನಿರ್ಣಯದಲ್ಲಿ ರಷ್ಯಾದ ಪರ ಹಾಗೂ ನಿರ್ಣಯದ ವಿರುದ್ಧ ಮತ ಹಾಕುವ ಮೂಲಕ ಗಮನ ಸೆಳೆದಿದೆ. ರಷ್ಯಾದ ಜೊತೆ ನೇರ ಮಾತುಕತೆ ಮೂಲಕ ಯುದ್ಧವನ್ನು ಕೊನೆಗಾಣಿಸಲು ಮುಂದಾಗಿರುವ ಟ್ರಂಪ್​, ಕಳೆದ ವಾರ ನಡೆದ ಪ್ರಾಥಮಿಕ ಮಾತುಕತೆಯಲ್ಲಿ ಉಕ್ರೇನ್​​ ಮತ್ತು ಯುರೋಪಿಯನ್​ ರಾಷ್ಟ್ರಗಳ ಬೆಂಬಲವನ್ನು ಹೊರಗೆ ಇಟ್ಟು ಚರ್ಚೆ ನಡೆಸಿದ್ದರು.


ವಿಶ್ವಸಂಸ್ಥೆ ನಿರ್ಣಯ ಅಂಗೀಕಾರ: 193 ಸದಸ್ಯರ ವಿಶ್ವಸಂಸ್ಥೆ ಸಾಮಾನ್ಯಸಭೆಯು ಉಕ್ರೇನ್ ಮತ್ತು ಅದರ ಯುರೋಪಿಯನ್ ಮಿತ್ರರಾಷ್ಟ್ರಗಳು ಮಂಡಿಸಿದ ನಿರ್ಣಯದ ಮೇಲೆ ಮತ ಚಲಾಯಿಸಿದವು. "ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪಿಸಬೇಕು " ಎಂಬ ಕರಡು ನಿರ್ಣಯ ಕೈಗೊಳ್ಳಲಾಗಿತ್ತು


ನಿರ್ಣಯದ ವಿಷಯ ಏನು?: ಈ ನಿರ್ಣಯವು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ನಾಗರಿಕ ಸಮಾಜ ಒಳಗೊಂಡಂತೆ ಅಗಾಧವಾದ ವಿನಾಶ ಮತ್ತು ಮಾನವ ಸಂಕಟದಿಂದ ಗುರುತಿಸಲ್ಪಟ್ಟಿರುವ ಉಕ್ರೇನ್ ವಿರುದ್ಧದ ಯುದ್ಧದ ಆರಂಭಿಕ ನಿಲುಗಡೆ ಮತ್ತು ಶಾಂತಿ ಕಾಪಾಡಬೇಕು ಎಂಬ ನಿರ್ಣಯಕ್ಕೆ ಕರೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್