LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್. ಐ. ಆರ್ ಒಂದು  ಪ್ರಜಾಪ್ರಭುತ್ವವನ್ನು ಬಲಪಡಿಸುವ ಪ್ರಕ್ರಿಯೆಯಾಗಿದೆ : ಬಿ.ವೈ. ವಿಜಯೇಂದ್ರ

ಬಳ್ಳಾರಿ, ಜು. 16: ದೇಶದಲ್ಲಿ ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ  ಮತದಾರರ  ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ  ಮತದಾರರ ಪಟ್ಟಿ ಪರಿಷ್ಕರಣೆ (SIR) ಅತ್ಯಂತ ಮಹತ್ವದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಬುಧವಾರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಪ್ರತಿಯೊಬ್ಬ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದ ಅವರು, ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಬಿಜೆಪಿ ಮುಖಂಡೆ ಗಾಲಿ ಲಕ್ಷ್ಮೀ ಅರುಣಾ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ಸುಶೀಲ್ ಕುಮಾರ್ ಹಾಗೂ ವೈ.ಎಂ. ಸತೀಶ್, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್, ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಟಿ.ಎಚ್. ಸುರೇಶ್ ಬಾಬು, ಎಂ.ಎಸ್. ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು, ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಬಸವನಗೌಡ ಪಾಟೀಲ್,  ಸೇರಿದಂತೆ ಜಿಲ್ಲೆಯ ಹಾಗೂ ನಗರದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್