LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯ!

ಬೆಂಗಳೂರು, ಸೆಪ್ಟೆಂಬರ್ 5: ಒಂಬತ್ತು ತಿಂಗಳ ಮಗುವಿನಿಂದ ತೊಡಗಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಶಿಶು ಸುರಕ್ಷಾ ಕವಚ ಅಥವಾ ಸುರಕ್ಷತಾ ಬೆಲ್ಟ್ (ಸೇಫ್ಟಿ ಹಾರ್ನೆಸ್ ಬೆಲ್ಟ್) ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ನಿಯಮವನ್ನು ಕಡ್ಡಾಯಗೊಳಿಸಿದ್ದರೂ, ಕರ್ನಾಟಕದಲ್ಲಿ ಇದು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಕುರಿತು ಈಗಾಗಲೇ ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.

ಸೇಫ್ಟಿ ಹಾರ್ನೆಸ್ ಬೆಲ್ಟ್ ಇಲ್ಲದೆ ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಅವರು ರಸ್ತೆಗೆ ಬೀಳುವ ಅಪಾಯ ಹೆಚ್ಚಿದೆ. ಅನೇಕ ಸವಾರರು ತಮ್ಮ ಮಕ್ಕಳನ್ನು ಬೈಕ್‌ಗಳ ಪೆಟ್ರೋಲ್ ಟ್ಯಾಂಕ್‌ಗಳ ಮೇಲೆ ಕೂರಿಸುತ್ತಾರೆ ಅಥವಾ ಫುಟ್‌ರೆಸ್ಟ್ ಪ್ರದೇಶದಲ್ಲಿ ನಿಲ್ಲಲು ಅವಕಾಶ ನೀಡುತ್ತಾರೆ. ಅಂತಹ ಸಂದರ್ಭಗಳಲ್ಲಿ, ಮಕ್ಕಳು ತಮ್ಮ ಸಮತೋಲನವನ್ನು ಕಳೆದುಕೊಳ್ಳಬಹುದು ಮತ್ತು ಬೀಳಬಹುದು. ವಿಶೇಷವಾಗಿ ಹಠಾತ್ ಬ್ರೇಕ್ ಹಾಕಿದಾಗ ಇಂಥ ಘಟನೆಗಳಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಲವು ಸಂದರ್ಭಗಳಲ್ಲಿ, ಸವಾರಿ ಮಾಡುವಾಗ ಮಕ್ಕಳು ನಿದ್ರಿಸಬಹುದು. ಅನೇಕ ಸವಾರರು ತಮ್ಮ ಶಿಶುಗಳನ್ನು ಒಂದು ಕೈಯಿಂದ ಹಿಡಿದುಕೊಂಡು ಮತ್ತೊಂದು ಕೈಯಿಂದ ವಾಹನವನ್ನು ಚಲಾಯಿಸುತ್ತಾರೆ, ಇದು ಮಗುವಿನ ಸುರಕ್ಷತೆಗೆ ಮತ್ತಷ್ಟು ಅಪಾಯಕರ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಅಂತಹ ಸಂದರ್ಭಗಳಲ್ಲಿ ಸುರಕ್ಷತಾ ಕವಚ ಧರಿಸಿದ್ದರೆ ಮಕ್ಕಳಿಗೆ ರಕ್ಷಣೆ ದೊರೆಯುತ್ತದೆ.

ಕರ್ನಾಟಕದಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಈಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ (ಡಿಸಿ) ಕಚೇರಿಗಳಲ್ಲಿ ಕೆಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಎಲ್ಲಾ ಡಿಸಿ ಕಚೇರಿಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಶಿಕ್ಷಣ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳಿಗೂ ಜಾಗೃತಿ ಅಭಿಯಾನಗಳನ್ನು ವಿಸ್ತರಿಸುವ ಯೋಜನೆಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳು ಪೂರ್ಣಗೊಂಡ ಬಳಿಕ ನಿಯಮ ಉಲ್ಲಂಘಿಸುವ ಸವಾರರಿಗೆ ದಂಡ ವಿಧಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್