LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾಹಿತಿ ಹಂ.ಪ.ನಾಗರಾಜಯ್ಯ ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ!

ಮೈಸೂರು, ಸೆಪ್ಟೆಂಬರ್​ 20: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ  ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.





2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.

ಮೈಸೂರು ದಸರಾ: ಯಾವ ದಿನ ಏನು ಕಾರ್ಯಕ್ರಮ?


ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.





ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 13ರಂದು ವಿಜಯ ದಶಮಿ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್