LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಂಡೂರು ಉಪಚುನಾವಣೆ ಯಾರಿಗೆ ಟಿಕೆಟ್​​? ವ್ಯಕ್ತಿ ಪ್ರತಿಷ್ಠೆ? ಪಕ್ಷ ಪ್ರತಿಷ್ಠೆ?

ಬಳ್ಳಾರಿ, ಅಕ್ಟೋಬರ್​ 18: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್​ 13 ರಂದು ಉಪಚುನಾವಣೆ  ನಡೆಯಲಿದೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ  ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಲಿವೆ. ಅದರಲ್ಲಂತೂ ಸಂಡೂರು ವಿಧಾನಸಭಾ ಕ್ಷೇತ್ರ ಅಖಾಡ ರಂಗೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್​​ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶ್ರೀರಾಮುಲು ಮತ್ತು ಬಿ ನಾಗೇಂದ್ರ ಸಂಡೂರು ಉಪಚುನಾವಣೆಯನ್ನು ವರ್ಚಸ್ಸಾಗಿ ತೆಗೆದುಕೊಂಡಿದ್ದಾರೆ. ಕಳೆದ ವಿಧಾಸನಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಶ್ರೀರಾಮುಲು ಅವರಿಗೆ ಸೋಲಾಗಿತ್ತು. ಈ ಸೋಲಿನಿಂದ ಶ್ರೀರಾಮುಲುಗೆ ಮುಖಭಂಗವಾಗಿದೆ. ಈ ಸೋಲಿನ ಸೇಡನ್ನು ತೇರಿಸಿಕೊಳ್ಳಲು ಶ್ರೀರಾಮುಲು ಹವಣಿಸುತ್ತಿದ್ದಾರೆ. ಹೀಗಾಗಿ ಶ್ರೀರಾಮುಲು ಅವರಿಗೆ ಸಂಡೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಇದೆ ಎಂದು ಹೇಳಲಾಗುತ್ತಿದೆ.

ಆದರೆ, ಆಪ್ತ ಸ್ನೇಹಿತನಾದ ಜನಾರ್ಧನ ರೆಡ್ಡಿ ಬೆಂಬಲ ಸಿಗುತ್ತಾ ಕಾದು ನೋಡಬೇಕಿದೆ. ಹೌದು, ಜನಾರ್ಧನ ರೆಡ್ಡಿ ಬಿಜೆಪಿ ಸೇರಿ, ಶ್ರೀರಾಮುಲು ಜೊತೆ ಮತ್ತೆ ಹಳೇ ದೋಸ್ತಿ ಮುಂದುವರೆಸುವ ಮಾತುಗಳನ್ನು ಆಡಿದ್ದಾರೆ. ಆದರೆ, ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ನಡುವೆ ಎಲ್ಲವೂ ಸರಿ ಇಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ರೆಡ್ಡಿ ಶ್ರೀರಾಮುಲುಗೆ ಬೆಂಬಲ ನೀಡುತ್ತಾರಾ ಕಾದುನೋಡಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ