LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿ : ಕಿರಣ ಶೀಂದೆ 


ಯರಗಟ್ಟಿ,ಜೂ,೨೬: ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳಾಸಬಲೀಕರಣ ಆಶಯ ಸಾಕಾರಗೊಳ್ಳುತ್ತದೆ ಎಂದು ಜಿಲ್ಲಾ ವ್ಯವಸ್ಥಾಪಕ ಕಿರಣ ಶೀಂದೆ ಹೇಳಿದರು.
ಸಮೀಪದ ತಲ್ಲೂರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಂಗಳವಾರ ಮಹಿಳಾ ಸಂಜೀವಿನಿ ಒಕ್ಕೂಟ ಹಮ್ಮಿಕೊಂಡಿದ್ದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ ಅವರನ್ನು ಆರ್ಥಿಕವಾಗಿ ಪ್ರಗತಿಶೀಲರನ್ನಾಗಿಸುವ ಸಲುವಾಗಿ ರಾಜ್ಯದೆಲ್ಲೆಡೆ ಸಂಜೀವಿನಿ ಒಕ್ಕೂಟಗಳನ್ನು ರಚಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳಿವೆ ಎಂದರು.
ಪಿಡಿಒ ರಾಘವೇಂದ್ರಕುಮಾರ ಎಸ್,ಪಿ ಮಾತನಾಡಿ, ಮಹಿಳಾ ಸಂಜೀವಿನಿ ಒಕ್ಕೂಟದಿಂದ ಗ್ರಾಮೀಣ ಪ್ರದೇಶಗಳ ಜನರ ಜೀವನ ಮಟ್ಟ ಸುಧಾರಣೆ ಸಾಧ್ಯ ಎಂದರು.
ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಹೊಸೂರ ಅಧ್ಯಕ್ಷತೆ ವಹಿಸಿದ್ದರು, ಸವದತ್ತಿ ತಾಲೂಕ ವ್ಯವಸ್ಥಾಪಕ ಶ್ರೀಕಾಂತ ಹೊಳೆನ್ನವರ, ಪುಂಡಲೀಕ ಹಟ್ಟಿಹೋಳಿ, ಶ್ರೀಕಾಂತ ಪಾಟೀಲ, ಪವನ ಪೋಳ, ರೂಪಶ್ರೀ ಪಾಟೀಲ, ಬಸವರಾಜ ಪಟ್ಟಣಶಟ್ಟಿ, ಶಾಂತಾ ಹಿರೇಮಠ, ಸವಿತಾ ಬೆನಕಟ್ಟಿ, ಲಕ್ಷ್ಮಿ ಪಾಟೀಲ, ಹುಸೇನಬಿ ಕುದರಿ, ಪ್ರೇಮಾ ಹುಬ್ಬಳ್ಳಿ, ಯಶೋಧಾ ಕಾಶಪ್ಪನವರ, ಸುಜಾತಾ ಬೆನಕಟ್ಟಿ, ನಿರ್ಮಲಾ ಭಜಂತ್ರಿ, ಗೌರವ್ವ ಉಪ್ಪಾರ ಹಾಗೂ ಸ್ವಸಹಾಯ ಸಂಘದ ಸದಸ್ಯರು ಇದ್ದರು.  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್