LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯಮಟ್ಟದ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಸಂತೋಷ ಹಡಪದ ದ್ವಿತೀಯ  ಸ್ಥಾನ 

ಬೈಲಹೊಂಗಲ: ಬೆಂಗಳೂರಿನ ವಿಕಾಸಸೌಧದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಆಯೋಜಿಸಿದ್ದ ರಾಜ್ಯಮಟ್ಟದ ಕಾನೂನು ವಿದ್ಯಾರ್ಥಿಗಳ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಬೈಲಹೊಂಗಲದ ಕೆ.ಆರ್.ಸಿ.ಎಸ್. ಸಂಸ್ಥೆಯ ಎಚ್.ವಿ. ಕೌಜಲಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂತೋಷ ಹಡಪದ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಹಾವಿದ್ಯಾಲಯ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ರಾಜ್ಯದ ವಿವಿಧ ಕಾನೂನು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಧಾನಮಂಡಲದ ಅಧಿವೇಶನದ ಮಾದರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು, ಸಂಸದೀಯ ನಿಯಮಗಳು, ಚರ್ಚಾ ಕೌಶಲ್ಯ, ಪ್ರಶ್ನೋತ್ತರ ಅವಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡುವ ಸಾಮರ್ಥ್ಯವನ್ನು ಆಧರಿಸಿ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು.
ಸಂತೋಷ ಹಡಪದ ಅವರು ತಮ್ಮ ವಾಗ್ಮಿತೆ, ಕಾನೂನು ಜ್ಞಾನ ಹಾಗೂ ಸಂಸದೀಯ ಪ್ರಕ್ರಿಯೆಗಳ ಮಾತುಗಾರಿಕೆಯಿಂದ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದರು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ  ಪಿ ಎನ್ ದೇಸಾಯಿ, ಕಾನೂನು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕರಾದ ಸಿ ಎಸ್ ಪಾಟೀಲ ಮುಖ್ಯಸ್ಥರಾದ ರೇವಯ್ಯ ಒಡೆಯರ್ ಹಾಗೂ ತೀರ್ಪುಗಾರರು ಪ್ರಶಸ್ತಿ ನೀಡಿ ಗೌರವಿಸಿದರು,
ಅವರ ಈ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಈ ಸಾಧನೆಯು ಕಾನೂನು ಶಿಕ್ಷಣ ಕ್ಷೇತ್ರದಲ್ಲಿ ಮಹಾವಿದ್ಯಾಲಯದ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದೆ. ಸಂತೋಷ ಹಡಪದ ಅವರ ಯಶಸ್ಸು ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎಂದು ಪ್ರಾಚಾರ್ಯರಾದ ಪಿ ಎನ್, ಪಾಟೀಲರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್