LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆನ್ಸಾರ್ ಗೆದ್ದ  ಸತ್ಯಂ 

ಅಶೋಕ್ ಕಡಬ ಅವರು ನಿರ್ದೇಶಿಸಿ ಮಹಾಂತೇಶ್ ವಿ ಕೆ ಅವರ ನಿರ್ಮಾಣದ  'ಸತ್ಯಂ' ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ.  ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ  ಮೆಚ್ಚುಗೆ  ವ್ಯಕ್ತಪಡಿಸಿ ಚಿತ್ರಕ್ಕೆ  ಯು/ಎ ಸರ್ಟಿಫಿಕೇಟ್ ನೀಡಿದೆ. ಯಾವುದೇ ಕಟ್, ಮ್ಯೂಟ್ ಇಲ್ಲದೆ ಈ ಚಿತ್ರ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.


ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ  ಈ  ಚಿತ್ರದಲ್ಲಿ  ಕನ್ನಡತಿ  ಖ್ಯಾತಿಯ ರಂಜನಿ ರಾಘವನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸತ್ಯಂ ಮಾಸ್ ಚಿತ್ರವಾದರೂ ತುಳುನಾಡಿನ ದೈವಾರಾಧನೆಯ ಬಗ್ಗೆ  ಒಂದು ಎಳೆ ಈ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ. ಕಾಂತಾರ ಚಿತ್ರಕ್ಕೂ ಮುನ್ನವೇ ಸತ್ಯಂ ಕಥೆಯನ್ನು ರೆಡಿ ಮಾಡಿಕೊಂಡಿದ್ದಾಗಿ ನಿರ್ದೇಶಕರೇ ಹೇಳಿದ್ದಾರೆ.


ಶ್ರೀ ಮಾತಾ ಕ್ರಿಯೇಷನ್ಸ್  ಬ್ಯಾನರಿನಡಿ ನಿರ್ಮಾಣವಾಗಿರುವ  'ಸತ್ಯಂ'  ಚಿತ್ರ ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳ ಚಿತ್ರವೆಂದು ನಿರ್ದೇಶಕ ಹೇಳಿದ್ದಾರೆ. ಶೀಘ್ರದಲ್ಲೇ ಚಿತ್ರದ ಟ್ರೈಲರ್  ಬಿಡುಗಡೆಯಾಗಲಿದೆ,  ರವಿ ಬಸ್ರೂರು  ಸಂಗೀತ ನಿರ್ದೇಶನ,  ಸಿನೆಟೆಕ್ ಸೂರಿ  ಛಾಯಾಗ್ರಹಣ, ತೆಲುಗು ನಟ ಸುಮನ್, ಸೈಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್,  ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ ಎನ್ ಲಕ್ಷ್ಮಿದೇವಿ, ಶೃಂಗೇರಿ ರಾಮಣ್ಣ, ತನುಶ್ರೀ, ಎಂ.ಎಸ್. ಉಮೇಶ್, ಬಸವರಾಜ್ ಕಟ್ಟಿ, ಮೀನಾಕ್ಷಿ ಮುಂತಾದವರ ತಾರಾಗಣವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್