LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ



ವಿಜಯಪುರ : ಎನ್‌ಎಸ್‌ಎಸ್ ಇದು ಶಿಸ್ತು, ಸಂಯಮ ಮತ್ತು ವ್ಯಕ್ತಿತ್ವ ವಿಕಸನದಂತಹ ವಿವಿಧ ಕೌಶಲ್ಯವನ್ನು ವೃದ್ದಿಸುವಲ್ಲಿ ಸಹಾಯಕ  ಎಂದು  ಜಿಲ್ಲಾ ಎನ್ ಎಸ್ ಎಸ್  ಸಂಯೋಜಕರಾದ  ಗಂಗಾಧರ ಕೆ. ಅಗಸರ್  ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟಿçÃಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ  ಏ.೨೧ ಜರುಗಿದ ದಿ.೨೧-೦೪-೨೦೨೫೬ ರಿಂದ ೨೬-೦೪-೨೦೨೬ ವರೆಗಿನ ವಾರ್ಷಿಕ ಎನ್ ಎಸ್ ಎಸ್ ವಿಶೇಷ ಶಿಬಿರವನ್ನು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಎನ್ ಎಸ್ ಎಸ್ ಎಂದರೆ ದೇಶ ಸೇವೆ ಅದರಂತೆ ಸೇವೆಯೊಂದಿಗೆ ಶಿಸ್ತು, ಸಂಯಮ ಸ್ವಚ್ಛತೆ ಅಲ್ಲದೆ ವ್ಯಕ್ತಿತ್ವ ವಿಕಸನ, ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಇಂತಹ ಶಿಬಿರವು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ ಅದ್ದರಿಂದ ಇಂತಹ ಶಿಬರದಲ್ಲಿ ಯಶಸ್ವಿಯಾಗಿ ಭಾಗವಹಿಸಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಅರಕೇರಿ ಪೌಢ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಎಂ. ಎಂ. ಶಿರಾಳಶೆಟ್ಟಿ, ಮಾತನಾಡಿ ತಮ್ಮ ಜೀವನದ ಅನುಭವಗಳು ಮತ್ತು ವಿದ್ಯಾರ್ಥಿಗಳು ಸತತ ಕಠಿಣ ಪರಿಶ್ರಮ ಹಾಗೂ ಸಮರ್ಪಣೆಯ ಮಹತ್ವವನ್ನು ಮತ್ತು ಮನೋಭಾವ ವೃದ್ಧಿಸಿಕೊಳ್ಳಲು ಸಲಹೆ ನೀಡಿದರು.
ಈ ವೇಳೆಯಲ್ಲಿ ಪ್ರಾಚಾರ್ಯ ಡಾ. ಅನೀಲ ಬಿ. ನಾಯಕ ಅಧ್ಯಕ್ಷ ನುಡಿಗಳನ್ನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಹೊರತಾಗಿ ಪಠ್ಯೇತರ ಚಟುವಟಿಕೆ ರಾಷ್ಟಿçÃಯ ಸೇವಾ ಯೋಜನೆಯಲ್ಲಿ  ಪಾಲ್ಗೊಂಡು  ಶಿಸ್ತು, ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ.ಪಿ.ಎಸ್.ಪಾಟೀಲ, ಮಹೇಶಕುಮಾರ ಬೆಲ್ಲದ್, ಎನ್ ಎಸ್ ಎಸ್ ಘಟಕ-೧ ಮತ್ತು ೨ ರ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಿಲನ್ ರಾಥೋಡ್, ಡಾ.ತರನ್ನುಮ್ ಜಬೀನ್ ಖಾನ್ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್