LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡ ಮಾತನಾಡಲು ಎಸ್‌ಬಿಐ ಮ್ಯಾನೇಜರ್‌ ನಿರಾಕರಣೆ: ಅಧಿಕಾರಿ ಟ್ರಾನ್ಸ್‌ಫರ್‌

ಬೆಂಗಳೂರು: ಎಸ್​ಬಿಐ ಬ್ರಾಂಚ್​​ ಮ್ಯಾನೇಜರ್​​​ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್​​​​ ಪೋಸ್ಟ್​ ಮಾಡಿರುವ ಅವರು, "ಆನೇಕಲ್​ನ ಸೂರ್ಯನಗರ ಮ್ಯಾನೇಜರ್​​ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಎಸ್​ಬಿಐ ಕ್ರಮ ಮೆಚ್ಚುವಂತದ್ದಾಗಿದ್ದು, ಆ ಮೂಲಕ ಈ ವಿವಾದಕ್ಕೆ ತೆರೆಬಿದ್ದಿದೆ" ಎಂದಿದ್ದಾರೆ.





ಇಂಥ ಘಟನೆಗಳು ಮರುಕಳಿಸಬಾರದು: "ಆದರೆ, ಇಂಥ ಘಟನೆಗಳು ಮರುಕಳಿಸಬಾರದು. ಎಲ್ಲ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನವನ್ನು ಮಾಡಬೇಕು" ಎಂದು ಮನವಿ ಮಾಡಿದ್ದಾರೆ.


"ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆ, ಸಂಸ್ಕೃತಿ ಬಗ್ಗೆ ತರಬೇತಿ ನೀಡಲು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಜನರನ್ನು ಗೌರವಿಸಿದ ಹಾಗೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಆಗಿರುವುದೇನು?: ಆನೇಕಲ್​ ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್​ಬಿಐ ಬ್ಯಾಂಕ್​​ ಮ್ಯಾನೇಜರ್​ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿತ್ತು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್