LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಜನೆಗಳ ಸೌಲಭ್ಯ ಫಲಾನುಭವಿಗಳಿಗೆ ಸಕಾಲದಲ್ಲಿ ಒದಗುವಂತಾಗಬೇಕು : ಅಶೋಕ ಮಂದಾಲಿ





ಗದಗ  ಜೂನ್ 17 : ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರAಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಅನುಷ್ಟಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಡವರಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿಯೇ ತಲುಪಿಸುವಂತಾಗಬೇಕು. ಪಂಚಗ್ಯಾರAಟಿ ಯೋಜನೆಗಳ ಅನುಷ್ಟಾನ ಶೇಕಡ ನೂರರಷ್ಟು ಪ್ರಗತಿ ಸಾಧಿಸಬೇಕು. ಗ್ಯಾರಂಟಿ ಯೋಜನೆಯ ಅನುಷ್ಟಾನದಲ್ಲಿ ಪ್ರಾಮಾಣಿಕತನವಿರಬೇಕು. ಬಡಜನರಿಗೆ ಸೇವೆ ಸಲ್ಲಿಸುವುದು ಪವಿತ್ರ ಕೆಲಸವಾಗಬೇಕು ಎಂದರು.

ರಸ್ತೆ ಅಕ್ಕಪಕ್ಕದಲ್ಲಿನ ವಿದ್ಯುತ್ ಕಂಬಗಳು ದುರಸ್ತಿಯಾದಾಗ ಅಥವಾ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಾಗ ಸಾರ್ವಜನಿಕರು ಹೆಸ್ಕಾಂ ಕಚೇರಿಯವರನ್ನು ಸಂಪರ್ಕಿಸಿದಾಗ ಹೆಸ್ಕಾಂನ ಲೈನ್‌ಮನ್‌ಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗದಗ ತಾಲೂಕಿನ ಬಸ್ ನಿಲ್ದಾಣಗಳ ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು, ಮಹಿಳೆಯರು, ಹಿರಿಯ ನಾಗರಿಕರು ಕುಳಿತುಕೊಳ್ಳಲು ಸೂಕ್ತ ಆಸನದ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ಇರುವಂತೆ ಗಮನ ಹರಿಸಬೇಕು ಎಂದರು.

ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಸಬಲೀಕರಣಗೊಳಿಸಲು ಗೃಹಲಕ್ಷಿö್ಮÃ ಯೋಜನೆಯನ್ನು ಜಾರಿಗೊಳಿಸಿದ್ದು ಈ ಸೌಲಭ್ಯದಿಂದ ಯಾವ ಅರ್ಹ ಫಲಾನುಭವಿಯೂ ವಂಚಿತರಾಗದAತೆ ನೋಡಿಕೊಳ್ಳಬೇಕು ಗೃಹಲಕ್ಷಿö್ಮÃ ಯೋಜನೆಯ ಹಣ ದುರುಪಯೋಗವಾಗದಂತೆ ಕ್ರಮ ವಹಿಸಬೇಕು. ಮರಣ ಹೊಂದಿದವರ ಖಾತೆಗ ಗೃಹಲಕ್ಷಿö್ಮÃ ಹಣ ಜಮಾ ಆಗುತ್ತಿದ್ದರೆ ಅಂತಹ ಪ್ರಕರಣಗಳಾಗದಂತೆ ತಡೆಯಲು ಕ್ರಮ ವಹಿಸಬೇಕು. ಒಂದು ವೇಳೆ ಮರಣ ಹೊಂದಿದವರ ಖಾತೆಗೆ ಗೃಹಲಕ್ಷಿö್ಮÃ ಹಣ ಜಮೆಯಾಗಿದ್ದರೆ ಅಂತಹ ಹಣವನ್ನು ಸರ್ಕಾರಕ್ಕೆ ಮರುಪಾವತಿಗೆ ಕ್ರಮ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಆಯಾ ವ್ಯಾಪ್ತಿಯಲ್ಲಿನ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿ ಗೃಹಲಕ್ಷಿö್ಮÃ ಯೋಜನೆಯ ಫಲಾನುಭವಿಗಳ ವಿವರ ಹಾಗೂ ಮರಣ ಹೊಂದಿದವರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಿರ್ದೇಶನ ನೀಡಬೇಕು. ಈ ವರದಿಯನ್ನು ಎಲ್ಲ ಬ್ಯಾಂಕುಗಳಿಗೆ ಸಲ್ಲಿಸಬೇಕು. ಒಟ್ಟಾರೆಯಾಗಿ ಗೃಹಲಕ್ಷಿö್ಮÃ ಯೋಜನೆಯ ಸೌಲಭ್ಯ ಪೂರ್ಣಪ್ರಮಾಣದಲ್ಲಿ ಸದ್ಭಳಕೆಯಾಗಬೇಕು ಎಂದು ಅಶೋಕ ಮಂದಾಲಿ ನಿರ್ದೇಶನ ನೀಡಿದರು.

ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ ಅವರು ಮಾತನಾಡಿ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯ ಮಾಹಿತಿ ತಲುಪಿಸಲು ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ತಾಲೂಕಿನ ಎಲ್ಲಾ ಪದವಿ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಾಹಿತಿ ಬ್ಯಾನರ್‌ಗಳನ್ನು ಅಳವಡಿಸುವ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಯುವನಿಧಿ ಯೋಜನೆಯ ಸೌಲಭ್ಯದಿಂದ ಯಾವೊಬ್ಬ ಅರ್ಹ ಫಲಾನುಭವಿ ವಂಚಿತರಾಗಬಾರದು. ಅನ್ನಭಾಗ್ಯ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕಳೆದ ಸಾಲಿನ ಸಭೆಯಲ್ಲಿನ ಯೋಜನೆಗಳ ಪ್ರಗತಿಯ ವಿವರಗಳು ಹಾಗೂ ಈಗಿನ ಸಭೆಯಲ್ಲಿನ ಪ್ರಗತಿ ವಿವರಗಳ ಪರಾಮರ್ಶೆ ನಡೆಸಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಅಧಿಕಾರಿಗಳು ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು ಎಂದರು.

ಪಂಚಗ್ಯಾರAಟಿ ಯೋಜನೆಯ ಸಂಬAಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.

ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ ಜನವರಿ ದಿ: 31-1-2026 ರವರೆಗೆ 2748 ಅಭ್ಯರ್ಥಿಗಳು ನೊಂದಣಿಯಾಗಿದ್ದು 1188 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆಯಾಗಿರುತ್ತದೆ. ಬಾಕಿ ಉಳಿದ 1560 ಅಭ್ಯರ್ಥಿಗಳು ಯುವ ನಿಧಿ ಯೋಜನೆಯ ಷರತ್ತುಗಳಿಗೆ ಹಂತ ಹಂತವಾಗಿ ಅರ್ಹರಾಗುತ್ತಾರೆ.

ಗೃಹಲಕ್ಷಿö್ಮÃ ಯೋಜನೆಯಡಿ ಗದಗ ತಾಲೂಕಿನಲ್ಲಿ 83593 ಸ್ವೀಕೃತಗೊಂಡ/ ನೊಂದಣಿಯಾದ ಅರ್ಜಿಗಳು ಇದ್ದು 80265 ಅರ್ಜಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿಯಾಗಿದೆ. ಶೇ 96.01 ರಷ್ಟು ಪ್ರಗತಿಯಾಗಿದೆ.

ಶಕ್ತಿ ಯೋಜನೆಯಡಿ ಗದಗ ಘಟಕದಲ್ಲಿ ದಿ:11-6-2023 ರಿಂದ 9-6-2026 ರವರೆಗೆ ಮಹಿಳಾ ಪ್ರಯಾಣಿಕರಿಂದ 10086.79 ಲಕ್ಷ ರೂ. ಆದಾಯವಾಗಿರುತ್ತದೆ. ದಿ: 1-6-2023 ರಿಂದ 9-6-2026 ರವರೆಗೆ ಬೆಟಗೇರಿ ಘಟಕದಲ್ಲಿ ಮಹಿಳಾ ಪ್ರಯಾಣಿಕರಿಂದ 5974.09 ಲಕ್ಷ ರೂ. ಆದಾಯವಾಗಿದೆ.

ಅನ್ನಭಾಗ್ಯ ಯೋಜನೆಯಡಿ ಗದಗ ಶಹರದ ಭಾಗದಲ್ಲಿ ಎನ್ ಎಸ್ ಎಫ್ ಎ ಅಕ್ಕಿ ಹಂಚಿಕೆ ( ಕೇಂದ್ರ ಸರ್ಕಾರ) ಮೇ ಮತ್ತು ಜೂನ್ 2026 ಮಾಹೆಯ ಹಂಚಿಕೆಯಡಿ ( ಎಎವೈ + ಬಿಪಿಎಲ್ ) 32694 ಪಡಿತರ ಕಾರ್ಡುದಾರರಿಗೆ 11236.30 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಗದಗ ಗ್ರಾಮೀಣ ಭಾಗದಲ್ಲಿ ಮೇ ಮತ್ತು ಜೂನ್ -2026 ರ ಮಾಹೆಯಲ್ಲಿ ಎನ್‌ಎಸ್‌ಎಫ್‌ಎ ಅಕ್ಕಿ ಹಂಚಿಕೆಯಡಿ (ಎಎವೈ+ ಬಿಪಿಎಲ್) 48534 ಪಡಿತರ ಕಾರ್ಡುದಾರರಿಗೆ 17890.70 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ 31-5-2026 ರವರೆಗೆ ಗದಗ ಶಹರದಲ್ಲಿ 46484 ಸ್ಥಾವರಗಳು ಅರ್ಹವಿದ್ದು ಆ ಪೈಕಿ 46240 ಸ್ಥಾವರಗಳು ನೊಂದಣಿಯಾಗಿವೆ. ಶೇ 99.48 ಪ್ರಗತಿ ಸಾಧಿಸಲಾಗಿದೆ. ಗದಗ ಗ್ರಾಮೀಣ ಉಪವಿಭಾಗದಲ್ಲಿ ಗೃಹ ಜ್ಯೋತಿ ಯೋಜನೆಗೆ 53324 ಸ್ಥಾವರಗಳು ಅರ್ಹವಿದ್ದು ಆ ಪೈಕಿ 53103 ಸ್ಥಾವರಗಳು ನೊಂದಣಿಯಾಗಿವೆ. ಶೇ 99.59 ರಷ್ಟು ಪ್ರಗತಿ ಸಾಧಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಬೋಳನವರ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರುಗಳಾದ ಶಂಭು ಕಾಳೆ, ಶ್ರೀಮತಿ ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಶ್ರೀಮತಿ ಸಾವಿತ್ರಿ ಹೂಗಾರ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಎಚ್.ಎಸ್.ಜಿನಗ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ,ವಿ, ಗ್ಯಾರಂಟಿ ಯೋಜನೆಗೆ ಸಂಬAಧಿತ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್