Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SCSP/TSP ಯೋಜನೆ ಹಣ ಗ್ಯಾರಂಟಿಗೆ ಬಳಕೆ ಆರೋಪ: ಪರಿಷತ್‌ನಲ್ಲಿ ಗದ್ದಲ

ಬೆಂಗಳೂರು: SCSP/TSP ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗುತ್ತಿದೆ ಎಂಬ ವಿಚಾರ ವಿಧಾನಪರಿಷತ್ತಿನಲ್ಲಿ ಶುಕ್ರವಾರ ತೀವ್ರ ಗದ್ದಲಕ್ಕೆ ಕಾರಣವಾಯಿತು.

ಎಸ್​ಸಿಎಸ್​ಪಿ ಹಾಗೂ ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಈ ಮೂಲಕ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ. ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸದಸ್ಯರಾದ ಹೇಮಲತಾ ನಾಯಕ್ ಹಾಗೂ ಶರವಣ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರು, ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಲಾಗಿಲ್ಲ. ಎಸ್​ಸಿ/ಎಸ್​ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುವುದಿಲ್ಲ. ಮೀಸಲಿಟ್ಟ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಸಲಾಗಿದೆ ಎಂದು ಹೇಳಿದರು.

ಇದಕ್ಕೆ ಆಕ್ಷೇಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ದಲಿತರಿಗೆ ಈ ಸರ್ಕಾರದಿಂದ ಆಗಿರುವಷ್ಟು ಅನ್ಯಾಯ ಬೇರೆ ಎಲ್ಲಿಯೂ ಆಗಿಲ್ಲ. ನಮಗೆ ಮೋಸ ಮಾಡಲು ನಮ್ಮ ಜನಾಂಗದ ವ್ಯಕ್ತಿಯನ್ನೇ ಇಡಲಾಗಿದೆ.‌ ಇದು ನಮಗೆ ಮಾಡುತ್ತಿರುವ ವಂಚನೆ. ನಮ್ಮ ಹಣವನ್ನು ನಮಗೆ ವಾಪಸ್‌ ಕೊಡಿಸಿ ಗ್ಯಾರಂಟಿಗಳಿಗೂ ನಮ್ಮ ಹಣವನ್ನೇ ಬಳಸಿಕೊಳ್ಳಲಾಗುತ್ತಿದೆ ಸಚಿವರು ಅನ್ಯ ಯೋಜನೆಗಳಿಗೆ ಕೊಡಲು ಬಿಡುವುದಿಲ್ಲ ಎಂದಿದ್ದಾರೆ.

ಸಚಿವರ ಹೇಳಿಕೆ ಸಂತಸ ತಂದಿದೆ. ಎಸ್‌ಸಿ ಎಸ್‌ಟಿ ಸಬ್​ ಪ್ಲಾನ್ ನಿಮ್ಮ ಪಕ್ಷದ ಪ್ರಣಾಳಿಕೆ ಅಷ್ಟೇ. ನೀವು ಮಾಡಿರುವುದು ಸಬ್​ ಪ್ಲಾನ್ ಅಲ್ಲ. ಇಲ್ಲಿ ಬಹಳ ದುರುಪಯೋಗ ಆಗುತ್ತಿದೆ. ಎಸ್​ಸಿ, ಎಸ್‌ಟಿ ಜನರು ಬೊಬ್ಬೆ ಹೊಡೆಯುತ್ತಿದ್ದಾರೆ. ಇವರಿಗಾಗಿ 42 ಸಾವಿರ ಕೋಟಿ ಇಟ್ಟಿದ್ದಾರೆ. ವಿವಿಧ ಇಲಾಖೆಗಳಿಗೆ 21 ಸಾವಿರ ಕೋಟಿ, ಹಾಗೂ ಗ್ಯಾರಂಟಿ ಯೋಜನೆಗಳಿಗೆ 14 ಸಾವಿರ‌ ಕೋಟಿ ಮೀಸಲಿಟ್ಟಿದ್ದಾರೆ ಬಾಕಿ ಉಳಿದಿರುವುದು 7 ಸಾವಿರ ಕೋಟಿ ಮಾತ್ರ. ದಲಿತರಿಗೆ ಈ ಸರ್ಕಾರ ಮಾಡಿದಷ್ಟು ಅನ್ಯಾಯ ಬೇರೆ ಸರ್ಕಾರ ಮಾಡಿಲ್ಲ. ಎಸ್​ಸಿ, ಎಸ್‌ಟಿ‌ಗಳಿಗೆ ಅನ್ಯಾಯ ಆಗುತ್ತಿದೆ. ಎಸ್‌ಸಿಪಿ, ಟಿಎಸ್‌ಪಿ ಹಣ ಗ್ಯಾರಂಟಿಗೆ ಕೊಡುವುದು ನಿಲ್ಲಿಸಬೇಕು. ನಿಲ್ಲಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*