LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಕೆಂಡ್ ಕೇಸ್ ಆಫ್ ಸೀತಾರಾಮ್ - ಕುತೂಹಲ ಹೆಚ್ಚಿಸಿದ ಟೀಸರ್

ವಿಜಯ ರಾಘವೇಂದ್ರ ನಟನೆಯ ಹೊಸ ಸಿನಿಮಾ ‘ಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌’ದ ಟೀಸರ್ ಬಿಡುಗಡೆಯಾಗಿದೆ.

ನಟಿ ಭಾವನ ಮೆನನ್, ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್ , ಉನ್ನಿ ಮುಕುಂದ್ ಹಾಗೂ ನವೀನ್ ಶಂಕರ್ ಸೋಷಿಯಲ್‌ ಮೀಡಿಯಾದಲ್ಲಿ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟೀಸರ್ ನ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ. ವಿಜಯ್‌ ರಾಘವೇಂದ್ರ, ಪೊಲೀಸ್‌ ಅಧಿಕಾರಿಯಾಗಿ ಮತ್ತೊಂದು ಪ್ರಕರಣವನ್ನು‌ ಇಲ್ಲಿ ಕೈಗೆತ್ತಿಕೊಂಡಿದ್ದಾರೆ.

2021ರಲ್ಲಿ ತೆರೆಕಂಡ ವಿಜಯ ರಾಘವೇಂದ್ರ ನಟನೆಯ ‘ಸೀತಾರಾಮ್‌ ಬಿನೋಯ್‌’ ಸಿನಿಮಾದ ಸೀಕ್ವೆಲ್‌ ಇದಾಗಿದೆ. ಇದರಲ್ಲಿ ಪೊಲೀಸ್‌ ಅಧಿಕಾರಿಯಾಗಿ ಮಿಂಚಿದ್ದರು. ಇದನ್ನು ದೇವಿಪ್ರಸಾದ್‌ ಶೆಟ್ಟಿ ಅವರೇ ನಿರ್ದೇಶಿಸಿದ್ದರು. ಇದೀಗ ಮತ್ತೊಮ್ಮೆ ದೇವಿ ಪ್ರಸಾದ್‌ ಶೆಟ್ಟಿ ಜೊತೆ ಸಿನಿಮಾ ಮಾಡಿದ್ದಾರೆ. ದೇವಿ ಪ್ರಸಾದ್ ಅವರೇ ಈ ಸಿನಿಮಾದ ಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿ ಸಾತ್ವಿಕ್‌ ಹೆಬ್ಬಾರ್‌ ಜೊತೆ ಕೈಜೋಡಿಸಿದ್ದಾರೆ. ನಿರ್ದೇಶಕ ಪವನ್‌ ಒಡೆಯರ್‌ ಸಿನಿಮಾವನ್ನು ಪ್ರಸ್ತುಪಡಿಸಲಿದ್ದಾರೆ.

'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಚಿತ್ರಕ್ಕೆ ಹೇಮಂತ್ ಆಚಾರ್ ಛಾಯಾಗ್ರಹಣ, ನವನೀತ್ ಶ್ಯಾಮ್ ಸಂಗೀತ ನಿರ್ದೇಶನ, ಶಶಾಂಕ್ ನಾರಾಯಣ್ ಸಂಕಲನ, ಭವಾನಿ ಶಂಕರ್‌ ಕಲಾ ನಿರ್ದೇಶನವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್