LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಪ್ತು ಗಾಂಜಾ ನಾಶ: 15.740 ಕೆ.ಜಿ. ಮಾದಕ ವಸ್ತು ವಿಲೇವಾರಿ

ಬಳ್ಳಾರಿ, ಜೂ.29:. ಬಳ್ಳಾರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿಯಾಗಿದ್ದ ಒಟ್ಟು 15.740 ಕೆ.ಜಿ. ಗಾಂಜಾವನ್ನು ನ್ಯಾಯಾಲಯಗಳ ಆದೇಶದಂತೆ ಶುಕ್ರವಾರ ವಿಲೇವಾರಿ ಮಾಡಿ ನಾಶಪಡಿಸಲಾಯಿತು.
ಹರಗಿನಡೋಣಿಯಲ್ಲಿರುವ ಸೂರ್ಯಕಾಂತ ಎನ್‌ವಿರಾನ್‌ಮೆಂಟ್ ಟೆಕ್ನಾಲಜೀಸ್ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ರೂ. 6,68,655 ಮೌಲ್ಯದ ಗಾಂಜಾವನ್ನು ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಸಮ್ಮುಖದಲ್ಲಿ ನಾಶಪಡಿಸಲಾಯಿತು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಅಧ್ಯಕ್ಷೆ ಡಾ. ಸುಮನ್ ಡಿ. ಪೆನ್ನೇಕರ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಎಎನ್‌ಟಿಎಫ್ ನೋಡಲ್ ಅಧಿಕಾರಿ ಎನ್. ನವೀನ್ ಕುಮಾರ್, ಡಿಎಸ್‌ಪಿ ವಿ. ಗೋವಿಂದ ರಾಜುಲು, ಡಿಎಸ್‌ಪಿ ಪಿ. ಮುರಳಿಧರ ಹಾಗೂ ಜಿಲ್ಲಾ ಮಟ್ಟದ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ನೋಡಲ್ ಅಧಿಕಾರಿ ಪಿಎಸ್‌ಐ ಭಾಗ್ಯಲಕ್ಷ್ಮಿ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿಯಾಗಿದ್ದ ಮಾದಕ ವಸ್ತುಗಳನ್ನು ನ್ಯಾಯಾಲಯಗಳ ನಿರ್ದೇಶನದಂತೆ ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪನ್ನೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್