LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ರಾಜ್ಯದ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ಪ್ರತ್ಯೇಕ ಶಾಲೆ: ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: "ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಕ್ಕಳಿಗೆ ಪ್ರತ್ಯೇಕ ಶಾಲೆ ಆರಂಭಿಸುತ್ತಿದ್ದೇವೆ. ಇದನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಬಳಿಯೇ ಪ್ರಾರಂಭಿಸಬೇಕು ಎಂದುಕೊಂಡಿದ್ದೇವೆ. ಇಲ್ಲಿ ಚಿಕಿತ್ಸೆಯ ಜೊತೆಗೆ ಶಿಕ್ಷಣವನ್ನು ಸಹ ನೀಡಲಾಗುತ್ತದೆ" ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.


ಜಿಲ್ಲಾ ಸಚಿವರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, "ಶಿಕ್ಷಣದಲ್ಲಿ ಮಕ್ಕಳಿಗೆ ಗುಣಮಟ್ಟ, ಸಮಾನತೆ ಮತ್ತು ಲಭ್ಯತೆ ಇರಬೇಕೆಂದು ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಎನ್​ಜಿಓ ಜೊತೆ ಸೇರಿ ಈ ಯೋಜನೆ ಹಮ್ಮಿಕೊಳ್ಳುತ್ತಿದ್ದೇವೆ. ಸದ್ಯ ನಮ್ಮ ರಾಜ್ಯದಲ್ಲಿ 3,500 ಮಕ್ಕಳಿಗೆ ಕ್ಯಾನ್ಸರ್ ಇರಬಹುದು ಎಂದು ಅಂದಾಜಿಸಲಾಗಿದೆ. ನಮಗೆ 1,500 ಮಕ್ಕಳು ಸಿಗಬಹುದು ಎಂಬ ನಿರೀಕ್ಷೆ ಇದೆ. 1ರಿಂದ 10ನೇ ತರಗತಿ ವರೆಗೂ ಶಾಲೆ ಆರಂಭ ಮಾಡುತ್ತಿದ್ದೇವೆ. ಇದು ಜಾರಿಯಾದಾಗ ತೃಪ್ತಿ ಸಿಗಬಹುದು. ಇದಕ್ಕೆ ಸಿಎಂ ಸಹ ನಮಗೆ ಬೆಂಬಲ ನೀಡಿದ್ದಾರೆ. ಈ ಜುಲೈನಿಂದಲೇ ಶಾಲೆ ಪ್ರಾರಂಭಿಸಬೇಕೆಂಬ ಯೋಚನೆಯಿದೆ" ಎಂದು ಹೇಳಿದರು.


"ಇನ್ಫೋಸಿಸ್​ನವರು ಶಿವಮೊಗ್ಗ ಗ್ರಾಮಾಂತರ ಭಾಗಕ್ಕೆ 200 ಕೋಟಿ ರೂ. ನೀಡಲಿದ್ದಾರೆ. ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳನ್ನು ಹೆಚ್ಚೆಚ್ಚು ಪ್ರಾರಂಭಿಸಲಾಗುವುದು. ಇದರಿಂದ ಮುಂದೆ ಸರ್ಕಾರಿ ಶಾಲೆಗಳಿಗೆ ಪ್ರವೇಶ ಹೆಚ್ಚಾಗುತ್ತದೆ. ರಾಜ್ಯದ ಇತಿಹಾಸದಲ್ಲಿ ಎಜುಕೇಷನ್ ಕಮಿಟಿ ಮಾಡಲಾಗುತ್ತಿದೆ. ಇದರ ಮೂಲಕ ಶಾಲೆಯಲ್ಲಿ ಇರುವ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಇಲ್ಲಿ ಶಿಕ್ಷಕರು ಹಾಗೂ ಎಸ್​.ಡಿ.ಎಂ.ಸಿ. ಸದಸ್ಯರಿಗೆ ಕೆಲಸವೇನು ಎಂಬುದನ್ನು ತಿಳಿಸಿಕೊಡಲಾಗುತ್ತದೆ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್