LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಟ್ಟೇರಿತು ಪೃಥ್ವಿ ಅಂಬಾರ್ ಚೌಕಿದಾರ್







     'ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ನಟಿಸುತ್ತಿರುವ  ‘ಚೌಕಿದಾರ್‌’ ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಮುಹೂರ್ತ ನೆರವೇರಿದೆ.


     ಚಿತ್ರದ ನಿರ್ಮಾಪಕರಾದ ಕಲ್ಲಹಳ್ಳಿ ಚಂದ್ರಶೇಖರ್ ಕ್ಲ್ಯಾಪ್ ಮಾಡಿದರೆ,  ಸಾಯಿಕುಮಾರ್ ಕ್ಯಾಮರಾ ಸ್ವಿಚ್‌ ಆನ್‌ ಮಾಡಿದರು. 'ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ‘ಡೈಲಾಗ್ ಕಿಂಗ್’ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಮನೆ ಕುಡಿ ಧನ್ಯರಾಮ್ ಕುಮಾರ್ ನಾಯಕಿಯಾಗಿದ್ದಾರೆ.


     ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ "ಇದು ನನ್ನ ಆರನೇ ಸಿನಿಮಾ. ಬಹುಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾದ ನಿರ್ಮಾಪಕರು. ರಥಾವರ ಹಿಟ್ ಆದಮೇಲೆ ನನಗೆ ಒಂದು ಸಿನಿಮಾ ಮಾಡಿ ಎಂದು ಕೇಳುತ್ತಿದ್ದರು. ಪೃಥ್ವಿ ಅವರನ್ನು ಲವರ್ ಬಾಯ್ ರೀತಿ ತೋರಿಸಿದ್ದಾರೆ. ಬೇರೆ ರೀತಿ ಟ್ರೈ ಮಾಡಬೇಕು ಎಂಬ ಆಸೆಯಿಂದ ಕಥೆ ಹೇಳಿದೆ. ಅವರು ಒಕೆ ಎಂದರು. ಅವರು ಪಾತ್ರಕ್ಕಾಗಿ ಸಾಕಷ್ಟು  ತಯಾರಿ ನಡೆಸುತ್ತಿದ್ದಾರೆ. ಅವರ ಜೋಶ್ ನೋಡಿ ಖುಷಿಯಾಯ್ತು. ಧನ್ಯ ಮೇಡಂ, ಸಾಯಿಕುಮಾರ್ ಸರ್, ಧರ್ಮ ಸರ್ ಎಲ್ಲರೂ ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ" ಎಂದು ತಿಳಿಸಿದರು.


     ನಟ ಪೃಥ್ವಿ ಅಂಬಾರ್ "ತಾಯಿ ಆಶೀರ್ವಾದದಿಂದ 'ಚೌಕಿದಾರ್' ಸಿನಿಮಾಗೆ ಚಾಲನೆ ಸಿಕ್ಕಿದೆ. ಖುಷಿ ದಿನ ಇವತ್ತು. ಕಥೆ ಕೇಳಿದಾಗ ನನಗೆ ಅನಿಸಿದ್ದು, ನಾನು ಈ ಪಾತ್ರ ಮಾಡಲು ಸಾಕಷ್ಟು ಎಫರ್ಟ್ ಹಾಕಬೇಕು ಎಂದು ನನಗೆ ಗೊತ್ತಾಯ್ತು, ಪ್ರಿಪೇರ್ ಆಗಲು ಟೈಮ್ ಬೇಕು ಎಂದೆ. ಅದರಂತೆ ಅವರು ನನಗೆ ಟೈಮ್ ಕೊಟ್ಟರು, ಅಲ್ಲಿಂದ ನನ್ನ ಜರ್ನಿ ಶುರುವಾಯ್ತು. ಒಂದು ದಿನ ಟೀಸರ್ ಶೂಟ್ ಮಾಡಿದ್ದೇವೆ.‌ ಬಹಳ ಖುಷಿ.‌ ಲಕ್ಕಿ ಫೀಲ್ ಮಾಡುತ್ತೇನೆ. ಜೀವನದ ಬಗ್ಗೆ ಬಹಳ ಅನುಭವವಿದೆ. ಕಂಪ್ಲೀಟ್ ಫ್ಯಾಮಿಲಿ ಜೊತೆಗೆ ಬೇರೆ ಎಲಿಮೆಂಟ್ ಮಿಕ್ಸ್ ಮಾಡಲಾಗಿದೆ. ಚೌಕಿದಾರ್ ಟೈಟಲ್ ಕೊಡುವ ವೈಬ್ಸ್ ಕಥೆಯಲ್ಲಿರುತ್ತದೆ" ಎಂದರು.

     ಸಾಯಿಕುಮಾರ್ "ಬಹಳ ಸಂತೋಷವಾಗುತ್ತಿದೆ. ಮುಂದಿನ ವರ್ಷ ನಟನಾಗಿ 50 ವರ್ಷ ಕಂಪ್ಲೀಟ್ ಆಗುತ್ತಿದೆ. ಕಾರಣ ಇದಕ್ಕೆಲ್ಲಾ ಅಪ್ಪ ಅಮ್ಮ. ನೀವು ಕನ್ನಡ ಸಿನಿಮಾ ಮಾಡಬೇಕು ಎಂದು ಅಮ್ಮ ಹೇಳುವವರು. ಕನ್ನಡ ಜರ್ನಿಗೂ 30 ವರ್ಷವಾಯ್ತು. ಪ್ರತಿ ದಿನ, ಪ್ರತಿ ಸಿನಿಮಾದ ಪಾತ್ರ ಚಾಲೆಂಜ್. ಈಗ ಹದಿನೈದು ಸಿನಿಮಾ ನಡೆಯುತ್ತಿದೆ. ಚಂದ್ರಶೇಖರ್ ಸಿನಿಮಾ ಗ್ಲಿಂಪ್ಸ್ ಚೆನ್ನಾಗಿದೆ" ಎಂದರು.


     ನಟಿ ಧನ್ಯ ರಾಮ್ ಕುಮಾರ್ " ಚೌಕಿದಾರ್' ಸಿನಿಮಾದಲ್ಲಿ ನನಗೆ ನಟಿಸಲು ಅವಕಾಶ ನೀಡಿದಕ್ಕೆ ಧನ್ಯವಾದಗಳು . ಪೃಥ್ವಿ ಅವರು, ಧರ್ಮ ಸರ್, ಸಾಯಿಕುಮಾರ್ ಸರ್ ಜೊತೆ ನಾನು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ" ಎಂದರು.


     ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್‌ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.  ವಿ ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಸಾಹಿತ್ಯ ಚಿತ್ರಕ್ಕಿದೆ. 'ಚೌಕಿದಾರ್' ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ಕಥಾಹಂದರ ಹೊಂದಿದೆ 'ಚೌಕಿದಾರ್'.













Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್