LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಧಾನಿ ಮೋದಿಜಿ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ "ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.


ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ "ಸೇವಾ ಪಾಕ್ಷಿಕ ಅಭಿಯಾನ" ಅಂಗವಾಗಿ ರಾಜಹಂಸಗಡದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಹಿಂದೂ ಧರ್ಮದ ಪ್ರಬಲ ಪ್ರತಿಪಾದಕರಾದ ಛತ್ರಪತಿ ಶಿವಾಜಿ ಮಹಾರಾಜರಿಗೆ ಗೌರವ ನಮನಗಳನ್ನು ಸಲ್ಲಿಸಲಾಯಿತು. ನಂತರ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ  ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ  ಸುಭಾಷ್ ಪಾಟೀಲ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.


ಮಾಜಿ ಶಾಸಕರಾದ  ಸಂಜಯ್ ಪಾಟೀಲ ಅವರ ನೇತೃತ್ವದಲ್ಲಿ ಸಿದ್ದೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು ಮೋದಿ ಅವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ, ಶಕ್ತಿ ಕೊಟ್ಟು   ಕಾಪಾಡಲಿ ಎಂದು ಪ್ರಾರ್ಥಿಸಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ  ಮಲ್ಲಿಕಾರ್ಜುನ್ ಮಾದಮ್ಮನವರ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ  ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ, ಮಹಾಂತೇಶ್ ಚಿನ್ನಪ್ಪಗೌಡರ, ಶ್ರೀ ದಾದಾಗೌಡ ಬಿರಾದಾರ,  ವೀರಭದ್ರಯ್ಯ ಪೂಜಾರಿ,  ಗುರು ಹಿರೇಮಠ ,  ಆನಂದ್ ಅತ್ತುಗೋಳ , ಚೇತನ್ ಪಾಟೀಲ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್