LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿ ಪ್ರತಿಷ್ಠಾಪಿಸಲು ಒತ್ತಾಯ

ಇಂಡಿ: ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಪಂಟಪದ ತ್ರಿಪುರಾಂತಕ ಕೆರೆ ಹತ್ತಿರ ೧೨ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವೀನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತಿದೆ. ಆದರೆ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯವರು ಹಸ್ತಕ್ಷೇಪ ಮಾಡಿ ಅನ್ಯ ಶರಣರ ಮೂರ್ತಿಯನ್ನು ಆಕ್ರಮವಾಗಿ ಪ್ರತಿಷ್ಠಾಪನೆ ಮಾಡಿದ್ದಾರೆ. ಆದ್ದರಿಂದ ಇದನ್ನು ತೆರವುಗೊಳಿಸಿ ತ್ವರಿತವಾಗಿ ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ನಗರದ ಶ್ರೀ ಹಡಪದ ಅಪ್ಪಣ್ಣವರ ವಿವಿಧ ಉದ್ದೇಶಗಳ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸಿಲ್ದಾರ ಬಿ.ಎಸ್.ಕಡಕಬಾವಿ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.
ಇದರಿಂದ ಹಡಪದ ಅಪ್ಪಣ್ಣನವರಿಗೆ ಮತ್ತು ನಮ್ಮ ಸಮುದಾಯದ ಭಕ್ತಿ ಭಾವನೆಗಳಿಗೆ ಅನ್ಯಾಯವಾಗಿದ್ದು ನಮ್ಮ ಇತಿಹಾಸದ ಮೌಲ್ಯಗಳನ್ನು ಕುಗುವಂತಾಗಿದೆ. ಹಡಪದ ಅಪ್ಪಣ್ಣನವರ ವಂಶಸ್ತರಾದ ನಮಗೆ ಧಕ್ಕೆಯನ್ನುಂಟು ಮಾಡಿದ್ದು ಈಗಾಗಲೆ ಈ ಕುರಿತು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದ್ದರಿಂದ ದಯವಿಟ್ಟು ಯಥಾಸ್ಥಿಗೆ ತಂದು ಆ ಸ್ಥಳವನ್ನು ಬಸವಕಲ್ಯಾಣ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ದಿ ಪಡಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಂಘದ ಅಧ್ಯಕ್ಷ ಸಂತೋಷ ಗೌಳಿ, ಉಪಾಧ್ಯಕ್ಷ ಶೀವಾನಂದ ನಾವಿ, ಸಿದ್ದು ನಾವಿ, ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ, ನಟರಾಜ ಗೌಳಿ, ಅಶೋಕ ಹಡಪದ, ಧುಳಪ್ಪ ನಾವಿ, ಬಾಳು ಗೌಳಿ, ಅಂಬಣ್ಣಾ ಹಡಪದ, ರಮೇಶ ನಾವಿ ಸೇರಿದಂತೆ ಅನೇಕರು ಇದ್ದರು. ಅದೇ ರೀತಿ ವಿಶ್ವ ಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯೂ ಅಲ್ಲಿ ಅಸ್ತತ್ವದಲ್ಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್