LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿರುಚಿತ್ರ ಫಸ್ಟ್ ಸ್ಯಾಲರಿ  



     ಸಿನಿಮಾ ಮತ್ತು ಮಾಧ್ಯಮ  ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ  ಶ್ರೀರಾಘವೇಂದ್ರ ಚಿತ್ರವಾಣಿ. ಇದರ  ಸ್ಥಾಪಕರಾದ ದಿ. ಡಿ.ವಿ ಸುಧೀಂದ್ರ ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು.

     ಜೊತೆಗೆ ತಮ್ಮದೇ ಸಂಸ್ಥೆಯಿಂದ ಒಲವಿನ ಉಡುಗೊರೆ; ಗಣೇಶನ ಮದುವೆ, ಗುಂಡನ ಮದುವೆ, ಪಟ್ಟಣಕ್ಕೆ ಬಂದ ಪುಟ್ಟ, ನಗು ನಗುತಾ ನಲಿ ಚಿತ್ರಗಳನ್ನು ದಿ. ಸುಧೀಂದ್ರ ಅವರು  ನಿರ್ಮಾಣ ಮಾಡಿದ್ದರು.

    ಪ್ರಸ್ತುತ ಈ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ

'ಫಸ್ಟ್ ಸ್ಯಾಲರಿ' ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ, ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ.  'ಫಸ್ಟ್ ಸ್ಯಾಲರಿ' ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

     ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದೆ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲೇ ಈ  ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

     ಕರೋನ ಸಮಯದಲ್ಲಿ 'ಕರಾಳ ರೋಗ ನಾಶ' ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಪವನ್ ವೆಂಕಟೇಶ್ ಅವರದಾಗಿದೆ. "ಫಸ್ಟ್ ಸ್ಯಾಲರಿ' ಕಿರುಚಿತ್ರ  24 ನಿಮಿಷವಿದ್ದು ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದಾರೆ ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್ ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ" ಎಂದು ನಿರ್ದೇಶಕ ಪವನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್