LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ


ಬಳ್ಳಾರಿ,ಜೂ24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಬೆಳಿಗ್ಗೆ 11 ಗಂಟೆಗೆÀ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಶಾಸಕ ನಾರಾ ಭರತ್‌ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.
ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶಶಿಕಾಂತ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.
ಬಳ್ಳಾರಿಯ ಎಸ್.ಲಕ್ಷಿö್ಮÃ ಪವನ್ ಕುಮಾರ್ ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್