LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

50 ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ಆಫರ್: CM ಸಿದ್ದರಾಮಯ್ಯ ಆರೋಪ

ಮೈಸೂರು: ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್​​ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಸಿದ್ರು.

ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ? ಎಂದು ಸಿಎಂ ಪ್ರಶ್ನೆ ಮಾಡಿದ್ರು.

ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ