LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾರ್ಯಾಂಗ ಮತ್ತು ಶಾಸಕಾಂಗ ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ: ಸಿದ್ದರಾಮಯ್ಯ ಬೇಸರ

ಬೆಂಗಳೂರು, ಜು.8: ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ, ಎಸ್​ಪಿ, ಸಿಇಒಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ