LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿವೃತ್ತ ಪ್ರಾಚಾರ್ಯ ಡಾ.ಚನ್ನಪ್ಪ ಕಟ್ಟಿ ಅವರಿಗೆ ಮೇ.೧ರಂದು ಅಭಿನಂದನಾ ಸಮಾರಂಭ

ಸಿಂದಗಿ: ಕುವೆಂಪು ಭಾ? ಭಾರತಿ ಪ್ರಾಧಿಕಾರದ ಅಧ್ಯಕ್ಷ, ಸಿಂದಗಿಯ ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ಚನ್ನಪ್ಪ ಕಟ್ಟಿ ಅವರಿಗೆ ಮೇ.೧ರಂದು ಅಭಿನಂದನಾ ಸಮಾರಂಭ, ನೆಲೆ ಅಭಿನಂದನ ಗ್ರಂಥ ಬಿಡುಗಡೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವು ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯಭವನದಲ್ಲಿ ಜರುಗಲಿದ ಎಂದು ಸಂಸ್ಥೆಯ ಸಂಚಾಲಕ ಡಾ.ಎಂ.ಎಂ.ಪಡಶೆಟ್ಟಿ ತಿಳಸಿದರು.
 ಸಿಂದಗಿ ನಗರದ ಬಸವ ಮಂಟಪದಲ್ಲಿ ನೆಲೆ ಪ್ರಕಾಶನ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.೧ ರಂದು ಬೆಳಿಗ್ಗೆ ೧೦ಗಂಟೆಗೆ ಡಾ.ಚನ್ನಪ್ಪ ಕಟ್ಟಿ ಸಾಹಿತ್ಯ ಮುಖಾಮುಖಿ ವಿಚಾರ ಸಂಕಿರಣವನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಮಕ್ಕಳ ಸಾಹಿತಿಗಳಾದ ಹ.ಮ.ಪೂಜಾರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಥಣಿಯ ಕತೆಗಾರ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ ಅವರು ಡಾ.ಚನ್ನಪ್ಪ ಕಟ್ಟಿ ಅವರ ಕತೆಯ ಕುರಿತು ಮಾತನಾಡಲಿದ್ದಾರೆ. ಬೆಂಗಳೂರಿನ ವಿಮರ್ಶಕಿ ಎನ್.ಆರ್.ಲಲಿತಾಂಬಾ ಕಟ್ಟಿ ಅವರ ಕಾವ್ಯ ಕುರಿತು, ತಿಪಟೂರಿನ ಅನುವಾದಕ ಬರಹಗಾರ ಎಸ್. ಗಂಗಾಧರಯ್ಯ ಅನುವಾದ ಕುರಿತು, ಹಂಪಿ ಕನ್ನಡ ವಿಶ್ವವಿದ್ಯಾಯದ ಸಂಶೋಧಕ ಡಾ.ಎಫ್.ಟಿ.ಹಳ್ಳಿಕೇರಿ ಅವರು ಕಟ್ಟಿ ಸಂಶೋಧನೆ ಕುರಿತಾಗಿ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯಪುರದ ಚಾಣಕ್ಯ ಕರಿಯರ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಇರಲಿದ್ದಾರೆ. 
 ಮಧ್ಯಾಹ್ನ ೨ಗಂಟೆಗೆ ಅಭಿನಂದನ ಸಮಾರಂಭ ಹಾಗೂ ನೆಲೆ ಅಭಿನಂದನ ಗ್ರಂಥ ಬಿಡುಗಡೆ ಜರುಗಲಿದೆ ಇದರ ಪಾವನ ಸಾನಿಧ್ಯವನ್ನು ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷರು, ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಅಧ್ಯಕ್ಷತೆಯನ್ನು ವಹಿಸಿವರು. ಹಾಲುಮತ ಗುರುಪೀಠ ಅಗತೀರ್ಥದ ಸರೂರದ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಸಮ್ಮುಖ ವಹಿಸಲಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನೆಲೆ ಅಭಿನಂದನ ಗ್ರಂಥವನ್ನು ಬೆಂಗಳೂರಿನ ಸಂಸ್ಕೃತಿ ಚಿಂತಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ. ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಅಭಿನಂದನಾ ನುಡಿ ಆಡಲಿದ್ದಾರೆ. 
 ಇದೇ ಸಂದರ್ಭದಲ್ಲಿ ನೆಲೆ ಪ್ರಕಾಶನದ ಚನ್ನಪ್ಪ ಕಟ್ಟಿ ಅನುವಾದಿಸಿದ ಕುವರಿಯಾದೊಡೆ ಕುಂದೇನು? ಗ್ರಂಥವನ್ನು ಶಾಸಕ ಅಶೋಕ ಮನಗೂಳಿ, ಸಂಗಮೇಶ ಮೇತ್ರಿ ಸಂಪಾದಿಸಿದ ಅಮೋಘಸಿದ್ಧ ಜನಪದ ಮಹಾಕಾವ್ಯ ಸಾಂಸ್ಕೃತಿಕ ಮುಖಾಮುಖಿ ಗ್ರಂಥವನ್ನು ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಚನ್ನಪ್ಪ ಕಟ್ಟಿ ಅವರ ವಿಮರ್ಶಾ ಸಂಕಲನ ಒಕ್ಕಣೆಯನ್ನು ವಿಪ ಮಾಜಿ ಸದಸ್ಯ ಅರುಣ ಶಹಾಪೂರ ಬಿಡುಗಡೆಗೊಳಿಸಲಿದ್ದಾರೆ. ಅಭಿನಂದನ ಗ್ರಂಥದ ಗೌರವ ಸಂಪಾದಕ ಡಾ.ಶ್ರೀರಾಮ ಇಟ್ಟಣ್ಣವರ, ಪ್ರಧಾನ ಸಂಪಾದಕ ಡಾ.ಎಂ.ಎಂ.ಪಡಶೆಟ್ಟಿ, ಡಾ.ಸಂಗಮೇಶ ಮೇತ್ರಿ, ಡಾ.ಚನ್ನಪ್ಪ ಕಟ್ಟಿ, ಸರೋಜಾ ಕಟ್ಟಿ ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವೇಳೆ ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ, ಎಂ.ಎಸ್.ಹೈಯ್ಯಾಳಕರ, ಶಿವಪ್ಪ ಗವಸಾಯಿ, ಬಿಎಸ್.ಹಣಮಶೆಟ್ಟಿ, ಚಿದಂಬರ ಬಂಡಗಾರ, ದೇವು ಮಾಕೊಂಡ, ಜಗದೀಶ ಕಲಬುರ್ಗಿ, ಎ.ಆರ್.ಹೆಗ್ಗನದೊಡ್ಡಿ, ಬಸಯ್ಯ ಮಠಪತಿ, ಡಾ.ಶರಣಬಸವ ಜೋಗುರ, ಶಿವಾನಂದ ಕಲಬುರ್ಗಿ ಸೇರಿದಂತೆ ಅವರ ಗೆಳೆಯರ ಬಳಗ, ಶಿಷ್ಯ ಬಗಳ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್