LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್‌ಐಆರ್ ವೇಳಾಪಟ್ಟಿ ಮರುನಿಗದಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ




ಕೊಪ್ಪಳ ಜುಲೈ 18 : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಮಗ್ರ (ಎಸ್‌ಐಆರ್) ಪರಿಷ್ಕರಣೆಯ ವೇಳಾಪಟ್ಟಿಯನ್ನು ಮರುನಿಗದಿಪಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಹೇಳಿದರು.
 ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಇದುವರೆಗಿನ ಪ್ರಗತಿಯ ಮತ್ತು ವೇಳಾಪಟ್ಟಿ ವಿಸ್ತರಣೆ ಕುರಿತು ಮಾಹಿತಿ ನೀಡಲು ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಗುರುವಾರ (ಜು. 16ರಂದು) ಕರೆದ ಜಿಲ್ಲೆಯ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
 ಬಿ.ಎಲ್.ಓ.ಗಳಿಂದ ಮನೆ ಮನೆ ಭೇಟಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ. ಮತಗಟ್ಟೆಗಳ ರ‍್ಯಾಷನಲೈಜೆಷನ್ ಆಗಸ್ಟ್ 8 ರೊಳಗೆ ನಡೆಯಲಿದ್ದು, ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ. ಆಗಸ್ಟ್ 17 ರಿಂದ ಸೆಪ್ಟೆಂಬರ್ 16ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಆಗಸ್ಟ್ 17 ರಿಂದ ಅಕ್ಟೋಬರ್ 15 ರವರೆಗೆ ನೊಟೀಸ್ ಅವಧಿ, ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. 2026ರ ಅಕ್ಟೋಬರ್ 19 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
 ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳು ಒಳಗೊಂಡಂತೆ ಕೊಪ್ಪಳ ಜಿಲ್ಲೆಯಲ್ಲಿರು ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರಿಗೆ ಮನೆಮನೆ ಭೇಟಿ ವೇಳೆ ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ಜುಲೈ 16ರ ಸಂಜೆವರೆಗೆ 7,69,695 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ಜಿಲ್ಲೆಯಲ್ಲಿಯಲ್ಲಿ ಶೇ. 64.07 ರಷ್ಟು ಪ್ರಗತಿಯಾಗಿದೆ. ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರಗಳವಾರು ಗಣತಿ ನಮೂನೆಗಳನ್ನು ಡಿಜಿಟಲೀಕರಣ ಪ್ರಗತಿಯು ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ. 70.49 ರಷ್ಟು ಆಗಿದೆ. ಯಲಬುರ್ಗಾ ಕ್ಷೇತ್ರದಲ್ಲಿ ಶೇ. 66.03 ರಷ್ಟು, ಗಂಗಾವತಿ ಕ್ಷೇತ್ರದಲ್ಲಿ ಶೇ. 63.06 ರಷ್ಟು, ಕುಷ್ಟಗಿ ಕ್ಷೇತ್ರದಲ್ಲಿ ಶೇ. 61.58 ರಷ್ಟು ಮತ್ತು ಕೊಪ್ಪಳ ಕ್ಷೇತ್ರದಲ್ಲಿ ಶೇ. 59.88 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲೀಕರಣವಾಗಿದೆ ಎಂದು ವಿವರಿಸಿದರು.
 ಪ್ರೊಜಿನಿ ಮ್ಯಾಪಿಂಗ್ ಒಳಗೊಂಡಂತೆ ಮತ್ತು ಆನ್‌ಲೈನ್ ಮೂಲಕ ಬಂದಿರುವ 475 ಅರ್ಜಿಗಳ ಪರಿಶೀಲನೆ ಬಾಕಿಯಿದೆ. ಇದುವರೆಗೂ 1426 ಗೈರು, 13,068 ಖಾಯಂ ಸ್ಥಳಾಂತರ, 9333 ಮೃತರು, 5131 ಡುಪ್ಲಿಕೇಟ್, 42 ಇತರೆ ಎಂಬುದಾಗಿ ಕಂಡು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬಿಎಲ್‌ಓ-ಬಿಎಲ್‌ಎ ಸಭೆ ಮಾಡಿದ್ದು, ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಲು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
 ಸಭೆಯಲ್ಲಿ ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತ್ರದ್, ಕೊಪ್ಪಳ ಜಿಲ್ಲೆಯ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಸುನೀಲ್ ಹೆಸರೂರ, ಕೃಷ್ಣ ಇಟ್ಟಂಗಿ, ಸೋಮನಗೌಡ, ಮಹೇಬುಬಪಾಶಾ ಸೇರಿದಂತೆ ಮತ್ತಿತರರು ಚುನಾವಣಾ ಶಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್