LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್‌ಐಆರ್ ಶೇ. ೧೦೦ ರಷ್ಟು ಪ್ರಗತಿ ಸಾಧಿಸಿರುವುದು ಶ್ಲಾಘನೀಯ : ವೈಷ್ಣವಿ ಉಮರ್ಜಿ

ಇಂಡಿ: ಸ್ಥಳೀಯ ಸಂಸ್ಥೆಗಳ ಚುನಾವಣಾ ಪೂರ್ವ ಸಿದ್ಧತೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಎಸ್‌ಐಆರ್ ನೋಂದಣಿ ಪ್ರಕ್ರಿಯೆಯನ್ನು ತಮ್ಮ ವ್ಯಾಪ್ತಿಯಲ್ಲಿ ಪ್ರತಿಶತ ನೂರರಷ್ಟು (೧೦೦%) ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಿ.ಎಲ್.ಒ ವೈಷ್ಣವಿ ಉಮರ್ಜಿ ಅವರನ್ನು ಅಧಿಕಾರಿಗಳು ಸತ್ಕರಿಸಿ,ಗೌರವಿಸಿದರು.
ಇಂಡಿ ನಗರದ ನಗರಸಭಾ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಹಾಗೂ ಇಂಡಿ ಪುರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ ಅವರು ವೈಷ್ಣವಿ ಉಮರ್ಜಿ ಅವರಿಗೆ ಶಾಲು ಹೊದಿಸಿ, ಸನ್ಮಾನ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ “ಎಸ್‌ಐಆರ್ ನೋಂದಣಿ ಕಾರ್ಯವು ಅತ್ಯಂತ ಜವಾಬ್ದಾರಿಯುತ ಹಾಗೂ ನಿಗದಿತ ಅವಧಿಯೊಳಗೆ ಮುಗಿಸಬೇಕಾದ ಕೆಲಸವಾಗಿದೆ. ಇಂತಹ ಮಹತ್ವದ ಕಾರ್ಯವನ್ನು ಬಿ.ಎಲ್.ಒ ವೈಷ್ಣವಿ ಉಮಾರ್ಜಿ ಅವರು ನಿಷ್ಠೆಯಿಂದ ನಿರ್ವಹಿಸಿ, ಶೇ. ೧೦೦ ರಷ್ಟು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ಇವರ ಕರ್ತವ್ಯ ಪ್ರಜ್ಞೆ ಇತರರಿಗೂ ಮಾದರಿಯಾಗಿದೆ” ಎಂದು ಪ್ರಶಂಸಿಸಿದರು.
ಪೌರಾಯುಕ್ತ ಶಿವಾನಂದ ಪೂಜಾರಿ ಅವರು ಮಾತನಾಡಿ, “ಚುನಾವಣಾ ಕಾರ್ಯಗಳಲ್ಲಿ ಬಿ.ಎಲ್.ಒಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ನೂರಕ್ಕೆ ನೂರರಷ್ಟು ಸಾಧನೆ ಮಾಡಿದ ವೈಷ್ಣವಿ ಅವರ ಕಾರ್ಯವೈಖರಿ ಎಲ್ಲರಿಗೂ ಪ್ರೇರಣೆಯಾಗಲಿ” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಇಂಡಿ ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶ್ರೀಕಾಂತ ಕೂಡಿಗನೂರ, ಮುಖಂಡ ಸುದೀರ ಕರಿಕಟ್ಟಿ, ನಗರಸಭೆ ಕಂದಾಯ ಅಧಿಕಾರಿ ಸದಾಶಿವ ನಿಂಬಾಳ್ಕರ್, ಕಿರಿಯ ಆರೋಗ್ಯ ನಿರೀಕ್ಷಕಿ ಸಂಗೀತಾ ಕೋಳಿ ಸೇರಿದಂತೆ ತಹಸೀಲ್ದಾರ್ ಕಚೇರಿ ಹಾಗೂ ಪುರಸಭೆಯ ಸಿಬ್ಬಂದಿ ಉಪಸ್ಥಿತರಿದ್ದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್